ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರು ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ- ಎಸ್ಪಿ ಸಿ.ಕೆ.ಬಾಬಾ

ದೊಡ್ಡಬಳ್ಳಾಪುರ : ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ನೀವು ಪಡೆದ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊರವಲಯದ ಅನಿಬಿಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ವಿವಿಧ ನೈಸರ್ಗಿಕ ವಿಕೋಪಗಳಿಂದ ಭಾರತವು ಹಾನಿಗೊಳಗಾದ ಸಮಯದಲ್ಲಿ ವಿಪತ್ತು ನಿರ್ವಹಣಾ ತಂಡವು ತಕ್ಷಣ ನೆರವಿಗೆ ಬರುತ್ತದೆ. 7 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಪ್ರತಿನಿತ್ಯ ಸಹಕಾರಿಯಾಗುವ ವಿಪತ್ತು ನಿರ್ವಹಣೆಯಿಂದ ಭೂಕಂಪ, ಅಗ್ನಿ ಅನಾಹುತ, ಪ್ರವಾಹಗಳಲ್ಲಿ ಜನರನ್ನು ರಕ್ಷಣೆ ಮಾಡುವ ವಿಧಾನ ತಿಳಿಸಲಾಗುತ್ತದೆ. ಅಲ್ಲದೇ ಮಕ್ಕಳಲ್ಲಿ ದೇಶಭಿಮಾನ, ರಾಷ್ಟ್ರೀಯತೆ ಜೊತೆಗೆ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ ಬೆಳೆಸುವುದು ವಿಶೇಷ. ನಾವು ಸದಾ ಕೆಲಸಗಳ ಒತ್ತಡದಲ್ಲಿರುತ್ತೇವೆ ಆದರೆ ಇಂತಹ ಕಾರ್ಯಕ್ರಮಗಳಲ್ಲಿ ಬಂದು ಭಾಗವಹಿಸಿದರೆ ನಮ್ಮ ಮೈಂಡ್ ರೀಫ್ರೆಶ್ ಆಗುತ್ತೆ ಎಂದರು.

ಇಂತಹ ತರಬೇತಿ ಶಿಬಿರದಲ್ಲಿ ಭಾಗವಹಿಸುವುದರಿಂದ ಶಿಸ್ತು, ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಈ ತರಬೇತಿಯಲ್ಲಿ ಬಹುದೂರದಿಂದ ಬಂದಿರುವ    ನೂರಾರು ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ವಿಶೇಷವಾಗಿದ್ದು. ಇಂದು ನಾನು ಅತ್ಯುತ್ತಮ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂಬ ಭಾವನೆ ನನ್ನಲ್ಲಿ ಮೂಡಿದೆ. ನನ್ನ  ವಿದ್ಯಾಭ್ಯಾಸದ ದಿನಗಳಲ್ಲಿ ಎಸಿಸಿ ಹಾಗೂ ಎನ್ ಎಸ್ ಎಸ್ ನಲ್ಲಿ ತರಬೇತಿ ಪಡೆದಿದ್ದೇನೆ. ಉತ್ತಮ ಜೀವನಶೈಲಿಗೆ ಇಂತಹ ತರಬೇತಿಗಳು ಅವಶ್ಯಕ  ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮಾತನಾಡಿ, ಸ್ಥಳೀಯವಾಗಿ ಯಾವುದೇ ನೈಸರ್ಗಿಕ ವಿಪತ್ತುಗಳ ಸಮಸ್ಯೆ ಇಲ್ಲದೆ  ನಾವು ನೀವು ಸುರಕ್ಷಿತವಾಗಿ ಇದ್ದೇವೆ  ಆದರೆ ಜಮ್ಮು ಕಾಶ್ಮೀರ, ಉತ್ತಾರಾಂಚಲ್ ಹೆಚ್ಚು ವಿಪತ್ತು ಸಂಭವಿಸುತ್ತದೆ.ನಮ್ಮ ರಾಜ್ಯದ ಕೋಸ್ಟಲ್ ಏರಿಯಾಗಳಲ್ಲಿ ಆಪತ್ತು ಸಂಭಾವಿಸುವ ಪ್ರಮಾಣ ಹೆಚ್ಚಾಗಿದ್ದು ವಿಪತ್ತು ನಿರ್ವಹಣಾ ತಂಡಗಳ  ಸಹಾಯದ ಅವಶ್ಯಕತೆ  ಹೆಚ್ಚಿರುತ್ತದೆ. ಇಂತಹ ತರಬೇತಿಗಳಲ್ಲಿ ಕೃಷಿ ಹೊಂಡಾ ಗಳ ಬಗ್ಗೆ ಅರಿವು ಮೂಡಿಸುವುದು  ಅಗತ್ಯವಾಗಿದ್ದು ನಗರ ಪ್ರದೇಶಗಳಲ್ಲಿ ಕೈಗಾರಿಕಾ ಆಪತ್ತುಗಳಿಂದ ನಾವು ಬಳಲಿದ್ದೇವೆ. ಇಂತಹ ಸಮಸ್ಯೆಗಳಿಂದ ಪಾರಾಗಲು ನಿಯತಕಲಿಕಾವಾಗಿ ಮಾಕ್ ಡ್ರಿಲ್  ಮಾಡಿಸುವ ಮೂಲಕ ಜನರನ್ನು ಜಾಗೃತಿ ಮೂಡಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದರು.

ಕರ್ನಾಟಕ ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಮಾತನಾಡಿ, 7 ದಿನಗಳ ಕಾಲದ ತರಬೇತಿಯಲ್ಲಿ ಸುಮಾರು 400ಕ್ಕೂ ಅಧಿಕ  ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ, ನೈಸರ್ಗಿಕ ವಿಪತ್ತು ನಿರ್ವಹಣೆ ಸಂದರ್ಭಗಳಲ್ಲಿ ಯುವ ಸಮುದಾಯದ ಪಾತ್ರ ಮುಖ್ಯವಾದದ್ದು, ಪ್ರತಿನಿತ್ಯ ಅವಶ್ಯಕವಿರುವ ತರಬೇತಿಯನ್ನು ಈ ಶಿಬಿರ ನೀಡಲಿದೆ. ಈ ತರಬೇತಿ ಪಡೆದ ಪ್ರತಿ ಮಗುವಿಗೂ ಜೀವ ವಿಮೆ ಹಾಗೂ ಉಪಯುಕ್ತ ವಿಪತ್ತು ನಿರ್ವಹಣಾ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಸ್ಕೌಟ್ಸ್ ಅಂಡ್ ಗೈಡ್ಸ್ ನ  ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

2 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

4 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

5 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

13 hours ago