
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್ ಘೋಷಿಸಲಾಗಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.
ಏರ್ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ನಿಗಾವಹಿಸುವಂತೆ ಎಸ್ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.
ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ ಏನೆಂದು ಪತ್ತೆಯಾಗಿಲ್ಲ. ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು.
ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ.