ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟ: ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ: 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಲಾಗಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.

ಏರ್​ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ನಿಗಾವಹಿಸುವಂತೆ ಎಸ್​ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.

ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟಕಕ್ಕೆ ಕಾರಣ ಏನೆಂದು ಪತ್ತೆಯಾಗಿಲ್ಲ. ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು.

ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ.

Ramesh Babu

Journalist

Recent Posts

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

19 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

23 hours ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

2 days ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

3 days ago