ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಕಾರ್ಮಿಕನೋರ್ವ ಸಾವು: ಮತ್ತೋರ್ವನ ಸ್ಥಿತಿ ಚಿಂತಾಜನಕ

ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಅರ್ಗ್ಯಾನಿಕ್ ಅರೋಮ್ಯಾಟಿಕ್ಸ್. ಪ್ರೈ.ಲಿ ಕಂಪನಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ(40) ಸ್ಥಳದಲ್ಲೇ ಮೃತನಾಗಿದ್ದಾನೆ.

ಚಿಗಮಲ್ಲಪ್ಪ ಮೂಲತಃ ವಿಜಯ ನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮದವನಾಗಿದ್ದು, ಟಿ.ದಾಸರಹಳ್ಳಿಯಲ್ಲಿ ವಾಸವಿದ್ದ ಎನ್ನಲಾಗಿದೆ.

ಮತ್ತೋರ್ವ ಕಾರ್ಮಿಕ ಮನೋಜ್(29) ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ, ಮನೋಜ್ ತುಮಕೂರು ಜಿಲ್ಲೆಯ ಬೆಳ್ಳಾವಿ ಸಮೀಪದ ಬಳ್ಳಾಪುರ ಮೂಲದವರು ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ: ರಾಸಾಯನಿಕ ಬಳಕೆ ಮಾಡುವ ಕಂಪನಿಯಲ್ಲಿ, ಮುಂಜಾಗ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದಾಗಿ  ತೀವ್ರವಾದ ಸ್ಫೋಟ ಉಂಟಾಗಿದೆ.

ಬಾಯ್ಲರ್ ಮಿಷಿನ್ ಗಳು ತುಕ್ಕು ಹಿಡಿದಿದ್ದು, ಸ್ಪೋಟದ ರಭಸ ತೀವ್ರವಾಗಿದ್ದುದರಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬಾಯ್ಲರ್ ರೀಪೇರಿ ಇದ್ದ ಹಿನ್ನೆಲೆಯಲ್ಲಿ ಬಾಯ್ಲರ್ ಅನ್ನು ಕಂಪನಿಯ ಒಳಗಿನಿಂದ ಹೊರಗಡೆ ತಂದಾಗ, ಸಿಡಿತ ಉಂಟಾಗಿದೆ, ಸ್ಫೋಟದ ರಭಸಕ್ಕೆ, ಬಾಯ್ಲರ್ ನ ಕಬ್ಬಿಣದ ತುಂಡುಗಳು, ಬೋಲ್ಟ್ ಗಳು ಬಹು ದೂರದವರೆಗೆ ಹಾರಿ ಬಿದ್ದಿದೆ.

ಒಂದು ವರ್ಷದ ಹಿಂದೆಯೂ ಸಹ, ಇದೇ ಕಂಪನಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಪದೇ ಪದೇ ಸಾವಿನ ಘಟನೆಗಳು ಮರುಕಳಿಸುತ್ತಿರುವುದು, ಸುರಕ್ಷತಾ ಕ್ರಮದ ವೈಫಲ್ಯವನ್ನು ಎದ್ದು ತೋರಿಸುವಂತಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಆರಕ್ಷಕ ನಿರೀಕ್ಷಕ ರವಿ.ಎಸ್. ಪಿಎಸ್ಐ ವಿಜಯಕುಮಾರಿ, ಎಎಸ್ಐ ವೀರಭದ್ರಯ್ಯ, ಮಲ್ಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

58 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago