ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಮರು‌ಸ್ಥಾಪನೆ: ನಗು ನಗುತಾ ಲೋಕಸಭೆ ಪ್ರವೇಶಿಸಿದ ರಾಹುಲ್ ಗಾಂಧಿ

ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ನಗು‌ನಗುತಾ ರಾಹುಲ್ ಗಾಂಧಿ ಅವರು ಸಂಸತ್ತನ್ನು ತಲುಪಿದರು. ಕಾಂಗ್ರೆಸ್ ಕಚೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ. ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸಂಸತ್ತಿಗೆ ಆಗಮಿಸಿದ ಕೂಡಲೇ ಕಾಂಗ್ರೆಸ್ ನಾಯಕರೊಂದಿಗೆ ಆವರಣದಲ್ಲಿ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿ ಆಶೀರ್ವಾದ ಪಡೆದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವದ ಅಮಾನತು ಆಗಸ್ಟ್ 7 ರಂದು ಹಿಂತೆಗೆದುಕೊಳ್ಳಲಾಯಿತು ಮತ್ತು ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿದ ನಂತರ ಕೇರಳದ ವಯನಾಡಿನ ಸಂಸದ ಎಂಬ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗಿದೆ.

ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.

ರಾಹುಲ್ ಅವರು 2019ರ ಏಪ್ರಿಲ್ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು.

ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿಯಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದ ಹಿನ್ನೆಲೆ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಲಾಗಿದೆ.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

3 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

7 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

22 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago