ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಹಾಗೂ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ, ಶಾಸಕ ಯಶ್ ಪಾಲ್ ಆನಂದ್ ಸುವರ್ಣ ಅವರು ರಾಹುಲ್ ಗಾಂಧಿ ಅವರನ್ನು ‘ಡ್ರಗ್ ಅಡಿಕ್ಟ್’ ಎಂದು ಸಾರ್ವಜನಿಕವಾಗಿ ಆರೋಪಿಸಿರುವುದನ್ನು ಖಂಡಿಸಿದರು.

ಬಳಿಕ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ ಪ್ರತಿಭಟನಾಕಾರರು, ಶಾಸಕನ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ರಾಹುಲ್ ಗಾಂಧಿ ಅವರ ಬಗ್ಗೆ ಮಾಡಿರುವ ಆರೋಪಕ್ಕೆ ಸೂಕ್ತ ಸಾಕ್ಷ್ಯ ಒದಗಿಸಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಸೇರಿದಂತೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಪ್ರಕರಣದಲ್ಲಿ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ನಗರಸಭೆ ಸದಸ್ಯ ಆನಂದ್, ಯುವ ಕಾಂಗ್ರೆಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಆರ್.ವಿ ಶಿವಕುಮಾರ್ ಸೇರಿದಂತೆ ಕಾರ್ಯಕರ್ತರು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

2 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

15 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

18 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

20 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

23 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

24 hours ago