ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ

 

ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಇಲ್ಲಿ‌ನ‌ ತಯಾರಿಕಾ ಘಟಕದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ ಮತ್ತು ಸುಸ್ಥಿರಗೊಳಿಸುವಂತಹ ಇಂತಹ ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ಆಗತೊಡಗಿರುವುದು ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಒಂದು ಉಜ್ಜ್ವಲ ಅಧ್ಯಾಯವಾಗಿದೆ. ಇದು ರಾಜ್ಯವು ಭವಿಷ್ಯದ ಸಂಚಾರ ವ್ಯವಸ್ಥೆಯ ನಿರ್ಮಾಣದ ಸರಿಯಾದ ಪಥದಲ್ಲಿ ಸಾಗುತ್ತಿರುವುದಕ್ಕೆ ಅತ್ಯುತ್ತಮ‌ ನಿದರ್ಶನವಾಗಿದೆ’ ಎಂದು ಬಣ್ಣಿಸಿದ್ದಾರೆ. ಇದೇ ವೇಳೆಯಲ್ಲಿ ಅವರು ಕಂಪನಿಯ ತಯಾರಿಕಾ ವ್ಯವಸ್ಥೆ ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು.

ಈ ಘಟಕದಲ್ಲಿ ವರ್ಷಕ್ಕೆ ಇಂತಹ ಉತ್ಕೃಷ್ಟ ಗುಣಮಟ್ಟದ 2 ಸಾವಿರ ಇ.ವಿ. ಬೈಕ್ ತಯಾರಿಸಲಾಗುವುದು. ಇವಕ್ಕೆ ಇಲ್ಲೇ ತಯಾರಿಸುವ ಬ್ಯಾಟರಿ ಅಳವಡಿಸಲಾಗುವುದು. ಇದು 1 ಲಕ್ಷ ಕಿ.ಮೀ. ವರೆಗೂ ವಾಹನ ಓಡಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕೆ 10 ವರ್ಷಗಳ ವಾರಂಟಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಉತ್ಪಾದನೆಯಿಂದ ವ್ಯಾಪಕ ಆರ್ಥಿಕ ಮೌಲ್ಯವೂ ಸೃಷ್ಟಿಯಾಗಲಿದೆ. ಇದು ಕೌಶಲ್ಯಪೂರ್ಣ ಉದ್ಯೋಗಗಳ ಸೃಷ್ಟಿ, ಸ್ಥಳೀಯ ಪೂರೈಕೆ ಸರಪಳಿ ಬಲವರ್ಧನೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾಲಿಗೆ ಸದವಕಾಶ ಇವೆಲ್ಲವನ್ನೂ ಸಾಧ್ಯವಾಗಿಸಲಿದೆ ಎಂದು ಅವರು ವಿವರಿಸಿದ್ದಾರೆ.

ವಾಹನ ಮಾರುಕಟ್ಟೆ ಈಗ ವಿದ್ಯುತ್ ಚಾಲಿತ ವಾಹನಗಳತ್ತ ಹೋಗುತ್ತಿದೆ. ರಾಜ್ಯದಲ್ಲಿ ಕೂಡ ಇದನ್ನು ಗಮನಿಸಿ, ಈಗಾಗಲೇ ಸಾವಿರಾರು ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇವುಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಲಾಗುವುದು. ಇದು ಇ.ವಿ. ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಸರಕಾರವು ಹೊಂದಿರುವ ಬದ್ಧತೆಯನ್ನು ಸೂಚಿಸುತ್ತದೆ ಎಂದು ಪಾಟೀಲ ಹೇಳಿದ್ದಾರೆ.

ಸಚಿವರು ಇಡೀ ಕಾರ್ಖಾನೆಯಲ್ಲಿ ಓಡಾಡಿ, ಬೈಕ್ ತಯಾರಿಕೆಯನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಯಮಾಹಾ ಇಂಡಿಯಾ ಅಧ್ಯಕ್ಷ ಜಿಮ್ ಅಯೋಟಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ರಿವರ್ ಸಿಇಒ ಅರವಿಂದ ಮಣಿ, ಸಹ ಸಂಸ್ಥಾಪಕ ವಿಪಿನ್ ಜಾರ್ಜ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

2 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

5 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

7 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

20 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

23 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago