ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡಿದ ತಪ್ಪಿಗೆ ಪೊಲೀಸರಿಗೆ ಫೈನ್ ಕಟ್ಟಿದ್ದಾನೆ.
ದೊಡ್ಡಬಳ್ಳಾಪುರದ ಈ ಮಂಜುನಾಥ್ ರೀಲ್ಸ್ ಮಾಡುತ್ತಾ… ಸಾಮಾಜಿಕ ಜಾಲತಾಣಗಳಲ್ಲಿ ಪರಿಚಿತರಾಗಿದ್ದಾನೆ, ರೀಲ್ಸ್ ಗಳಲ್ಲಿ “ಬನ್ರೋ” ಎನ್ನುವ ಮೂಲಕ ಪ್ರಸಿದ್ಧಿಯಾಗಿದ್ದಾನೆ. ಇದೀಗ ಇದೇ ರೀಲ್ಸ್ ಮಂಜಣ್ಣ ರೀಲ್ಸ್ ಮಾಡುವ ಇಬ್ಬರು ಮಹಿಳೆಯರ ಜೊತೆಯಲ್ಲಿ ಹೆಲ್ಮೆಟ್ ಇಲ್ಲದೇ ತ್ರಿಬಲ್ ರೈಡಿಂಗ್ ಮಾಡಿದ್ದ ರೀಲ್ಸ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದನ್ನು ಗಮನಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು… ಕೂಡಲೇ ಠಾಣೆಗೆ ಕರೆಸಿ ರೀಲ್ಸ್ ಮಂಜಣ್ಣನಿಗೆ ಫೈನ್ ಹಾಕಿದ್ದಾರೆ….ಇನ್ನು ಮುಂದೆ ಸಂಚಾರಿ ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ… ಇದರ ಜೊತೆಗೆ ರೀಲ್ಸ್ ಮಂಜಣ್ಣನು ಸಹ ತಾನು ಮಾಡಿರುವ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದಾನೆ…
ಫೈನ್ ಕಟ್ಟಿದ ನಂತರ, ಹೆಲ್ಮೆಟ್ ಹಾಕದೆ ತ್ರಿಬಲ್ ರೈಡಿಂಗ್ ಮಾಡಿದ್ದು ನನ್ನ ತಪ್ಪು, ಮನೆಯಲ್ಲಿ ನಮ್ಮನ್ನೇ ನಂಬಿರುವ ಜನರಿದ್ದಾರೆ, ಸುರಕ್ಷಿತ ಚಾಲನೆಗೆ ಹೆಲ್ಮೆಟ್ ಧರಿಸಿ ಎಂದು ಜನರಿಗೆ ರೀಲ್ಸ್ ಮಂಜಣ್ಣ ಮನವಿ ಮಾಡಿದ್ದಾನೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…