
ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಗೆ ಇಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ ಇಲ್ಲಿಂದ ರಾಷ್ಟ್ರೀಯ ಮಟ್ಟದ ವೀಕ್ಷಣಾ ತಂಡದ ಸದಸ್ಯರಾದ ಡಾ. ಎಸ್. ದಯಾಕರ್ ರೆಡ್ಡಿ ಅವರು ಭೇಟಿ ನೀಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ಕೌಶಲ್ಯಾಧಾರಿತ ತರಬೇತಿಗಳು ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿದರಲ್ಲದೆ, ಸಂಸ್ಥೆಯಲ್ಲಿ ನಡೆಯುತ್ತಿದ್ದ ಕೌಶಲ್ಯಾಧಾರಿತ ತರಬೇತಿಯಾದ ಲಘುವಾಹನ ಚಾಲನಾ ತರಬೇತಿಯ ಶಿಬಿರಾರ್ಥಿಗಳೊಂದಿಗೆ ಚರ್ಚೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಪಿಓ ನಾಗಮಣಿ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ, ನೆಲಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ, ಜಿಲ್ಲಾ ಪಂಚಾಯಿತಿ ಡಿಪಿಎಂ ಮಂಜುಳಾ, ಡಿಎಂ ಅಶೋಕ್, ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.