Categories: ಕೋಲಾರ

ರೆವೆನ್ಯು ಮತ್ತು ಅರಣ್ಯ ಭೂಮಿ ಗುರುತಿಸುವಲ್ಲಿ‌ ಗೊಂದಲ- ರೆವೆನ್ಯು ಮತ್ತು ಅರಣ್ಯ ಇಲಾಖೆ ಜಂಟಿ‌ ಸರ್ವೆ ಮಾಡಿ ವರದಿ ಒಪ್ಪಿಸುವಂತೆ ಸೂಚಿಸಿದ ಸಿಎಂ‌ ಸಿದ್ದರಾಮಯ್ಯ

ರೆವೆನ್ಯು ಮತ್ತು ಅರಣ್ಯ ಭೂಮಿ ಗುರುತಿಸುವ ವಿಚಾರದಲ್ಲಿ ಆಗುತ್ತಿರುವ ತೊಂದರೆಗಳನ್ನು, ಗೊಂದಲಗಳನ್ನು ಪರಿಹರಿಸಲು ಎರಡೂ ಇಲಾಖೆಯ ಜಂಟಿ ಸರ್ವೆ ಮಾಡಿ ಜಿಲ್ಲಾಧಿಕಾರಿಗಳು ವರದಿ ನೀಡಬೇಕು. ಈ ಸಮಸ್ಯೆ ರಾಜ್ಯ ಮಟ್ಟದಲ್ಲೂ ಇರುವುದರಿಂದ ವಿಧಾನಸೌಧದಲ್ಲಿ ಪ್ರತ್ಯೇಕ ಉನ್ನತ ಮಟ್ಟದ ಸಭೆ ಕರೆಯುತ್ತೇನೆ. ಅಲ್ಲಿಯವರೆಗೂ ಜಿಲ್ಲೆಯಲ್ಲಿ ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಬರಗಾಲದ ಸಮಸ್ಯೆ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿದೆ? ಎಷ್ಟು ಗ್ರಾಮಗಳಲ್ಲಿ ಟ್ಯಾಂಕರ್ ನೀರು ನೀಡಲಾಗುತ್ತಿದೆ ಎಂಬ ಮಾಹಿತಿ ಒದಗಿಸಬೇಕು. ಇತರೆ ಯಾವುದೇ ನೀರಿನ ಮೂಲಗಳು ಇಲ್ಲದಿದ್ದಾಗ ಅಪರೂಪದ ಸಂದರ್ಭಗಳಲ್ಲಿ ಮಾತ್ರ ಬೋರ್ ವೆಲ್ ಕೊರೆಸಲು ಅವಕಾಶ ಮಾಡಿಕೊಳ್ಳಬಹುದು ಎಂದರು.

ಮಲದ ಗುಂಡಿಗೆ ಮಕ್ಕಳನ್ನು ಇಳಿಸಿ ಶುಚಿಗೊಳಿಸಿದ ಪ್ರಕರಣದಲ್ಲಿ ಮೂವರನ್ನು ಮಾತ್ರ ಜೈಲಿಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನೂ ಇಬ್ಬರು ಆರೋಪಿಗಳನ್ನು ಏಕೆ ಬಂಧಿಸಿಲ್ಲ? ಅವರನ್ನು ತಕ್ಷಣ ಬಂಧಿಸಬೇಕು. ಇದೊಂದು ಕ್ರೂರ ಕೃತ್ಯ. ಇಂತಹುದ್ದನ್ನು ನಾವು ಅಪ್ಪಿತಪ್ಪಿಯೂ ಸಹಿಸುವುದಿಲ್ಲ. ಎರಡು ದಿನಗಳಲ್ಲಿ ಉಳಿದಿಬ್ಬರನ್ನು ಬಂಧಿಸಿ ಜೈಲಿಗಟ್ಟಬೇಕು. ಈ ಘಟನೆ ಇಡೀ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಒಂದು ಪಾಠ. ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದು ಎಂದು ತಿಳಿಸಿದರು.

ವಸತಿ ಶಾಲೆಗಳ ಒಳಗೆ ಪೋಷಕರು ಪ್ರವೇಶಿಸಲು ಅವಕಾಶ ನೀಡಬೇಕು. ಇದರಿಂದ ಪೋಷಕರಿಗೆ ವಸತಿ ಶಾಲೆಗಳ ಗುಣಮಟ್ಟ ಗೊತ್ತಾಗುತ್ತದೆ. ಹೀಗೆ ಮಾಡುವುದರಿಂದ ವಸತಿ ಶಾಲೆಗಳು ಜೈಲುಗಳು ಎನ್ನುವ ಭಾವನೆ ಹೋಗುತ್ತದೆ ಎಂದು ಹೇಳಿದರು.

ನನಗೆ ದಲಿತ ಚಳವಳಿಗಳ ಜತೆ ಒಡನಾಟ ಮೊದಲೂ ಇತ್ತು, ಈಗಲೂ ಇದೆ, ಸಾಯುವವರೆಗೂ ಇರುತ್ತದೆ. ಹಿಂದೆ “ಸರಾಯಿ ಬೇಡ-ವಸತಿ ಶಾಲೆ ಬೇಕು” ಎನ್ನುವುದು ದಲಿತ ಚಳವಳಿಯ ಘೋಷಣೆಯಾಗಿತ್ತು. ಅದಕ್ಕಾಗೇ ನಾನು ಹೋಬಳಿಗೊಂದು ವಸತಿ ಶಾಲೆ ಆರಂಭಿಸಿದೆ. ಈ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಿಸಬೇಕು. ಶಿಕ್ಷಕರಿಗೆ ತರಬೇತಿ ನೀಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು ಎಂದರು.

ದೇವಸ್ಥಾನದ ಮತ್ತು ವಕ಼್ಫ್ ಬೋರ್ಡ್‌ಗೆ ಸಂಬಂಧಪಟ್ಟ ಸ್ಥಳಗಳು, ಜಮೀನು ಆಯಾ ಆಯಾ ಸಂಸ್ಥೆಗೆ ಹೋಗಬೇಕು. ಇವರ ಜಾಗ ಅವರಿಗೆ ಅವರ ಜಾಗ ಇವರಿಗೆ ಹೋಗದಂತೆ, ತಾಂತ್ರಿಕ ದಾಖಲಾತಿಗಳ ಗೊಂದಲ ಉಂಟಾಗದಂತೆ ಸಮಗ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ವಿಶ್ವಕರ್ಮ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳಲ್ಲೂ ನಿಯಮಾನುಸಾರ ಎಲ್ಲಾ ಜಾತಿ ಧರ್ಮದವರಿಗೂ ಅವಕಾಶ ನೀಡಬೇಕು ಎಂದು ತಿಳಿಸಿದರು.

ಕೋಲಾರ ಜಿಲ್ಲೆಯಲ್ಲಿ ಅಪರಾಧಗಳ ಹೆಚ್ಚಳ ಆದರೆ ನಾನು ಸಹಿಸಲ್ಲ. ಕೋಲಾರ ಅಪರಾಧ ಮುಕ್ತ ಆಗಬೇಕು. ಚಾಳಿಬಿದ್ದ ಆರೋಪಿಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ, ಭ್ರೂಣಹತ್ಯೆ ತಪ್ಪಿಸಬೇಕು. ಕೋಲಾರದಲ್ಲಿ ಈ ಪ್ರಮಾಣದಲ್ಲಿ ಹೆಚ್ಚಾಗಲು ಕಾರಣವೇನು? ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಜಿಲ್ಲೆಯ ಅಧಿಕಾರಿಗಳ ಕರ್ತವ್ಯ. ಮುಂದೆ ಇಂಥವು ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಖಚಿತ ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿಗಳ ಮತ್ತು ತಹಶೀಲ್ದಾರ್‌ಗಳ ಖಾತೆಯಲ್ಲಿ ಬರ ನಿರ್ವಹಣೆಗೆ ಅಗತ್ಯವಾದ ಹಣ ಇದೆ. ಜನ-ಜಾನವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಮೇವಿಗೆ ತೊಂದರೆ ಇಲ್ಲ . ಮುಂದಿನ ಹಲವು ವಾರಗಳಿಗೆ ಆಗುವಷ್ಟು ಮೇವು ಸಂಗ್ರಹ ಇದೆ. ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಸೃಷ್ಟಿ ಬಗ್ಗೆ ಆದ್ಯತೆ ನೀಡಬೇಕು.
ನರೇಗಾ ಉದ್ಯೋಗ 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಇನ್ನೂ ಕೇಂದ್ರದಿಂದ ಒಪ್ಪಿಗೆ ಸಿಕ್ಕಿಲ್ಲ ಎಂದರು.

ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಆಗುವವರೆಗೂ ರೈತರಿಗೆ 2 ಸಾವಿರ ತಕ್ಷಣಕ್ಕೆ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದೇನೆ. ಸಣ್ಣ ಪುಟ್ಟ ಸಮಸ್ಯೆಗಳಿಗೂ ಕೋಲಾರದ ಜನ ನನ್ನ ಬಳಿಗೆ ಬಂದರೆ ಇಲ್ಲಿ ಜಿಲ್ಲಾಡಳಿತ ವಿಫಲ ಎಂದೇ ಪರಿಗಣಿಸಬೇಕಾಗುತ್ತದೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜನರ ಹಣದಲ್ಲಿ ಅಧಿಕಾರಿಗಳಿಗೆ ಸವಲತ್ತುಗಳು ಸಿಗುತ್ತಿವೆ. ಆದ್ದರಿಂದ ನಾವು ಜನರ ಪರವಾಗಿರಬೇಕು. ರೈತರನ್ನು ಪೊಲೀಸ್ ಮತ್ತು ಇತರೆ ಇಲಾಖೆ ಅಧಿಕಾರಿಗಳು ಸತಾಯಿಸಬಾರದು. ಇದನ್ನು ನಾನು ಸಹಿಸಲ್ಲ. ಇದನ್ನು ಎಸ್.ಪಿ ಗಳು ಗಮನಿಸಬೇಕು. ಎಸ್.ಪಿ ಗಳು ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕೋಲಾರ ಜಿಲ್ಲೆ ಪ್ರಗತಿ ಸಾಧಿಸಬೇಕು. ಆರೋಗ್ಯ ಮತ್ತು ಶಿಕ್ಷಣದಲ್ಲಿ ಮುಂದಿರಬೇಕು. ಮಕ್ಕಳಲ್ಲಿ ಅನಿಮೀಯ, ರಕ್ತ ಹೀನತೆ 0.6℅ ಹೆಚ್ಚಾಗಿದೆ. ಇದನ್ನು ನಿಯಂತ್ರಿಸಲು ಏನು ಕ್ರಮ ಕೈಗೊಳ್ಳಲಾಗಿದೆ? ಅನಿಮಿಯ ಮುಕ್ತ ಕರ್ನಾಟಕ ನಮ್ಮ ಸರ್ಕಾರದ ಮಹತ್ವದ ಕಾರ್ಯಕ್ರಮ. ಇದನ್ನು ಪರಿಣಾಮಕರಿಯಾಗಿ ಜಾರಿ ಮಾಡಬೇಕು ಎಂದು ತಿಳಿಸಿದರು.

ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಲ್ಲಿ ನಾವು ಊಟ ಕೊಡುತ್ತಿದ್ದೇವೆ. ಆದರೂ ರಕ್ತಹೀನತೆ ಪ್ರಮಾಣ 0.6℅ ಹೆಚ್ಚಾಗಿದ್ದು ಏಕೆ ಎಂದು ಪರಿಶೀಲಿಸಿ, ತಕ್ಷಣ ಪರಿಹಾರ ಮಾಡಬೇಕು. 31 ಜಿಲ್ಲೆಗಳಲ್ಲಿ ತಲಾ ಆದಾಯದಲ್ಲಿ ಕೋಲಾರ 19ನೇ ಸ್ಥಾನದಲ್ಲಿದೆ ಏಕೆ? ಜಿಲ್ಲಾ ಮಟ್ಟದ ಅಧಿಕಾರಿಗಳೇ ಹೊಣೆಯಾಗಿದ್ದು, ಮುಂದಿನ ಸಭೆಗಳಲ್ಲಿ ಇದೆಲ್ಲಾ ಸುಧಾರಿಸಿರಬೇಕು ಎಂದರು.

ಸ್ಮಶಾನ ಮತ್ತು ಖಬರಸ್ತಾನಕ್ಕೆ ಅಗತ್ಯ ಜಾಗಗಳನ್ನು ಒದಗಿಸಬೇಕು.‌ ಸರ್ಕಾರಿ ಸ್ಥಳ ಇಲ್ಲದಿದ್ದರೆ ಖರೀದಿಸಿ ಕೊಡಬೇಕು. ದಲಿತರು ಸೇರಿದಂತೆ ಯಾವುದೇ ಸಮುದಾಯ, ಧರ್ಮದವರಿಗೂ ಶವ ಸಂಸ್ಕಾರಕ್ಕೆ ತೊಂದರೆ ಆಗಕೂಡದು ಎಂದು ಸೂಚಿಸಿದರು.

Ramesh Babu

Journalist

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

5 minutes ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

6 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

6 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

13 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

24 hours ago