ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮಹಿಳೆಯ ದಾರುಣ ಸಾವು

ರೆಸಾರ್ಟ್‌ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.

ಕುಂದಲಗುರ್ಕಿ ಗ್ರಾಮದ 37 ವರ್ಷದ ರೇಖಾ ಮೃತ ಮಹಿಳೆ.

ಅಂದಹಾಗೆ ಮೃತ ಮಹಿಳೆ ಎಫ್ ಇ ಎಸ್ ಎಂಬ ಎನ್ ಜಿ ಒ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದು, ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ನೇಚರ್ ರೆಸಾರ್ಟ್ ಕಂ ಹೋಟೆಲ್ ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದ್ರೆ ದುರದೃಷ್ಟವಶಾತ್ ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ.

ಕೆಲಕಾಲ ನೀರಿನಲ್ಲಿ ಧುಮುಕಿರುವ ಮಹಿಳೆ ರೇಖಾ ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ..ಆದ್ರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತುಕೊಂಡು ಬಂದಿದ್ದಾರೆ.

ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಈ ಸಂಬಂಧ ಮುಂಜಾಗ್ರತಾ ರಕ್ಷಣಾ ಕವಚಗಳನ್ನ ನೀಡದೆ ನಿರ್ಲಕ್ಷ್ಯದಡಿ ರೆಸಾರ್ಟ್ ಮಾಲೀಕರು, ಹಾಗೂ ರೇಖಾರನ್ನ ಕೆರೆದುಕೊಂಡು ಹೋಗಿದ್ದ ಸಂಸ್ಥೆಯ ವಿರುದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ..ಇನ್ನೂ ಈ ಘಟನೆ ರೆಸಾರ್ಟ್ ನ ಸಿ ಸಿ ಟಿವಿಯಲ್ಲಿ ಸಹ ದಾಖಲಾಗಿದೆ.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

8 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

12 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

15 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago