ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೆಸ್ಟೋರೆಂಟ್ ಜನರಲ್ ಲೈಸನ್ಸ್ ಹೊಂದಿರುವ ನರಸಿಂಹಮೂರ್ತಿ ಎಂಬುವವರು ಪರವಾನಗಿ ನವೀಕರಣಕ್ಕೆ ಪಿಡಿಒ ಬಳಿ ಹೋಗಿದ್ದರು.
ಪರವಾನಗಿ ನವೀಕರಿಸಿಕೊಡಲು 5 ಲಕ್ಷ ಲಂಚದ ಹಣಕ್ಕೆ ಪಿಡಿಒ ಬೇಡಿಕೆ ಇಟ್ಟಿದ್ದರು. ಕೊನೆಗೂ 3.5ಲಕ್ಷಕ್ಕೆ ಮಾತುಕತೆಯಾಗಿತ್ತು. ಈ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ನರಸಿಂಹಮೂರ್ತಿ. ಅವರು ನೀಡಿದ ದೂರಿನ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳವಾರ ಪಿಡಿಒ ನಿರಂಜನ್ ಅವರು ದೊಡ್ಡಬಳ್ಳಾಪುರ ತಾಲೂಕು ಪಂಚಾಯ್ತಿ ಆವರಣದಲ್ಲಿರುವ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕರ ಕೊಠಡಿಯಲ್ಲಿ 3.5ಲಕ್ಷ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು, ಡಿಎಸ್ಪಿಗಳಾದ ಟಿ.ಸಿ. ವೆಂಕಟೇಶ್, ಗಿರೀಶ್ ರೋಡಕರ್, ಚಂದ್ರಕಾಂತ್, ವೆಂಕಟೇಶ್, ನಂದಕುಮಾರ್, ರಮೇಶ್ ಭಾಗವಹಿಸಿದ್ದರು.
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…