
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಾಮೀನು ರದ್ದಾಗಿದೆ. ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ ಹಲವು ಮಂದಿಗೆ ಜಾಮೀನು ನೀಡಿತ್ತು. ಇದೀಗ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದೆ.
ಹೈಕೋರ್ಟ್ ಆದೇಶದ ಲೋಪವನ್ನು ಎತ್ತಿ ತೋರಿಸಿದ ಸುಪ್ರೀಂಕೋರ್ಟ್, ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಆದೇಶಿಸಿ 7 ಮಂದಿಗೆ ಇಂದು ಬಿಗ್ ಶಾಕ್ ನೀಡಿದೆ.
ದರ್ಶನ್ ಮತ್ತೆ ಜೈಲು ಸೇರಲಿದ್ದಾರೆ. ಇದು ನಟ ದರ್ಶನ್ ಹಾಗೂ ಅಭಿಮಾನಿಗಳಿಗೆ ದೊಡ್ಡ ಶಾಕ್ ಆಗಿದೆ.