ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಸೇರಿ 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಕೊಲೆ ಆರೋಪಿಗಳನ್ನ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ. ಈ ಹಿನ್ನೆಲೆ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಆಗುವವರೆಗೂ ಕೂಡ ಏನು ಹೇಳೋಕಾಗಲ್ಲ ಎಂದು ಗೃಹ ಸಚಿವ . ಜಿ ಪರಮೇಶ್ವರ್ ಹೇಳಿದರು.
ದರ್ಶನ್ ಅವರು ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ..? ಯಾವ ಕಾರಣಕ್ಕೂ ಮರ್ಡರ್ ಆಗಿದೆ? ಇವರ ಹೆಸರು ಯಾಕೆ ಬಂದಿದೆ ಅನ್ನೋದು ತನಿಖೆ ನಂತರ ಗೊತ್ತಾಗುತ್ತೆ ಎಂದು ಹೇಳಿದ್ದಾರೆ
ಮೈಸೂರಿನಲ್ಲಿ ಅರೆಸ್ಟ್ ಮಾಡಿ, ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಇದು ಮರ್ಡರ್ ಕೇಸ್ ಆಗಿರುವುದರಿಂದ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಹಾಗಾಗಿ ಅರೆಸ್ಟ್ ಮಾಡಿಕೊಂಡು ಬಂದಿದ್ದಾರೆ ಎಂದು ಹೇಳಿದರು.