ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ತೋಟದಲ್ಲಿದ್ದವು, ಅದು ಯಾರ ಕೆಟ್ಟ ಕಣ್ಣುಗಳಿಗೆ ಬಿತ್ತೊ ಗೊತ್ತಿಲ್ಲ. ರಾತ್ರೋರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿ ವಿಕೃತಿ ಮೆರೆದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ.
ಮೂರು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ ಹಾಕಿದ್ದರು. ಇನ್ನೇನು ಎರಡು ತಿಂಗಳು ಆಗಿದ್ದರೆ, ಬಾಳೆ ಗೊನೆ ಬಿಟ್ಟು ಫಸಲು ಕೈಗೆ ಬರಬೇಕಿತ್ತು. ಅಷ್ಟರಲ್ಲೆ ದುಷ್ಕರ್ಮಿಗಳು ರಾತ್ರೋರಾತ್ರಿ ಎಲ್ಲವನ್ನು ನಾಶ ಮಾಡಿದ್ದಾರೆ.
ಸೋಮವಾರ ಕುಟುಂಬಸ್ಥರು ನಂಜನಗೂಡು ದೇವಸ್ಥಾನಕ್ಕೆ ಹೋಗಿದ್ದೆವು. ಮೂರು ಎಕರೆ ಪ್ರದೇಶದಲ್ಲಿ ಮೂರುಸಾವಿರ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರಲ್ಲಿ 1000ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಇದರಿಂದ ₹5ಲಕ್ಷ ನಷ್ಟವಾಗಿದೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ’ ಎಂದು ರೈತ ಮಂಜುನಾಥ್ ತಿಳಿಸಿದ್ದಾರೆ.
ನಂದಿನಿ ಮಾತನಾಡಿ, ನಮ್ಮ ಹಸು ಬೇರೆಯವರ ಹೊಲದಲ್ಲಿ ಮೇಯಲು ಹೋಗಿತ್ತು. ಆಗ ಕೆಲವರು ನಮ್ಮ ಮೇಲೆ ಗಲಾಟೆ ಮಾಡಿದ್ದರು. ನಾವು ಊರಲ್ಲಿ ಇಲ್ಲದ ಸಮಯ ನೋಡಿಕೊಂಡು ಬಾಳೆಗಿಡಗಳನ್ನು ಅವರೇ ನಾಶ ಮಾಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನಮಗೆ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಬೇಕು’ ಎಂದು ಅಳಲು ತೋಡಿಕೊಂಡರು.
ಇನ್ನು ಈ ಕೃತ್ಯವನ್ನು ಹಳೆಯ ದ್ವೇಷಕ್ಕೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…