ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಬೇಕು- ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ….? ಇಲ್ಲಿದೆ ಮಾಹಿತಿ‌ ಓದಿ

ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೆಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ, ಎಣ್ಣೆಕಾಳು ಅಭಿಯಾನ ಯೋಜನೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಬೆಳೆ ವಿಮೆಗೆ ನೋಂದಾಯಿಸಲು ಪ್ರೇರೇಪಿಸಿ ಎಂದರು.

*ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ*

ರಾಗಿ (ಮಳೆಯಾಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.
ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.
ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.
ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.
ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.
ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.
ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.
ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.

ರೈತರಿಗೆ ಕೃಷಿ ಕಾರ್ಯಾಗಾರವನ್ನು ಆಯೋಜನೆ ಮಾಡಿ, ರೋಗ ಬಾಧೆಯಿಂದ ಬೆಳೆಯ ರಕ್ಷಣೆ, ಗೊಬ್ಬರ ಪೂರೈಕೆ, ಇಳುವರಿ ಹೆಚ್ಚಿಸುವ ಬೆಳೆಗಳ ಕುರಿತು ಜಾಗೃತಿ ಮೂಡಿಸಿ. ಸಿರಿಧಾನ್ಯ, ಎಣ್ಣೆ ಕಾಳುಗಳ ಬೆಳೆಗೆ ಹೆಚ್ಚಿನ ಪ್ರೊತ್ಸಾಹ ಕಲ್ಪಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

*ಬೆಳೆ ಸಮೀಕ್ಷೆ ನಿಖರವಾಗಿ ಆಗಬೇಕು*

ಜಿಲ್ಲೆಯಲ್ಲಿ ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಳ್ಳುತ್ತಿದ್ದು ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕಿದೆ. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು. ಮೊಬೈಲ್ ಅಪ್ಲಿಕೇಶನ್ ನಲ್ಲಿ ಸಮೀಕ್ಷೆ ನಡೆಸಿ ನಿಖರ ಅಂಕಿ ಅಂಕಿಅಂಶಗಳ ಕ್ರೂಡಿಕರಣ ಮಾಡಿ. ಬೆಳೆ ಸಮೀಕ್ಷೆಯಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಿಖರವಾಗಿ ಇರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

Ramesh Babu

Journalist

Recent Posts

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

41 minutes ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

59 minutes ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

2 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

13 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

18 hours ago