ರೈತರಿಗೆ 5 ಗಂಟೆಗಳ ನಿರಂತರ ವಿದ್ಯುತ್ ಪೂರೈಕೆಗೆ ಆದೇಶ: ಕೋಜನರೇಶನ್ ವ್ಯವಸ್ಥೆಯ ಮೂಲಕ ವಿದ್ಯುತ್ ಉತ್ಪಾದನೆಗೆ ಕ್ರಮ- ಸಿಎಂ ಸಿದ್ದರಾಮಯ್ಯ

ಜನರಿಗೆ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಹಾಗೂ ಮೇವು ಬೆಳೆಯಲು ಹಾಗೂ ಸಂಗ್ರಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.

ಈ ಬಾರಿ ಮಳೆಯ ಅಭಾವದಿಂದಾಗಿ ರೈತರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರೈತರಿಗೆ ಐದು ಗಂಟೆಗಳ ನಿರಂತರ ವಿದ್ಯುತ್ ಪೂರೈಕೆಗೆ ಆದೇಶ ನೀಡಲಾಗಿದೆ. ವಿಶೇಷವಾಗಿ ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಯ ಭತ್ತ ಬೆಳೆಯುವ ರೈತರಿಗೆ ಏಳು ಗಂಟೆ ವಿದ್ಯುತ್ ನೀಡಲು ಆದೇಶಿಸಿದೆ. ಸುಮಾರು 2 ಸಾವಿರ ಮೆಗಾ ವ್ಯಾಟ್ ವರೆಗೆ ವಿದ್ಯುತ್ ಖರೀದಿ ಮಾಡಬೇಕಾಗಿದೆ. ಕೋಜನರೇಶನ್ ವ್ಯವಸ್ಥೆಯ ಮೂಲಕ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕಲ್ಲಿದ್ದಲ್ಲಿನ ಗುಣಮಟ್ಟದ ಮೇಲೆ ವಿದ್ಯುತ್ ಉತ್ಪಾದನೆಯ ಪ್ರಮಾಣ ನಿಗದಿಯಾಗುತ್ತದೆ. ಅದರಲ್ಲಿ ಕೆಲವೊಮ್ಮೆ 50 ರಿಂದ 60 ಮೆ.ವ್ಯಾ ವಿದ್ಯುತ್ ಮಾತ್ರ ಉತ್ಪಾದನೆ ಸಾಧ್ಯವಾಗುತ್ತದೆ ಎಂದು ಹೇಳಿದರು.

2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.

51 ಕೋಟಿ ರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂ. ವೆಚ್ಚದಲ್ಲಿ ಆಟ್ರ್ಸ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *