Categories: ಕೃಷಿ

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ State Farmer Registry ಸ್ಥಾಪಿಸಲು ಯೋಜಿಸಲಾಗಿದೆ.

ಮಾನದಂಡಗಳ ಪ್ರಕಾರ FRUITS (State Farmer Registry) ಹಾಗೂ ಭೂಮಿ (Land Records System) ದತ್ತಾಂಶಗಳನ್ನು ನಿಯತವಾಗಿ Synchronize ಮಾಡುವುದು ಅತಿ ಮುಖ್ಯವಾಗಿರುತ್ತದೆ ಹಾಗೂ ಇದರೊಂದಿಗೆ FRUITS (State Farmer Registry) ತಂತ್ರಾಂಶದಲ್ಲಿ ರೈತರ e-KYC ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ (Digital Farmer Consent With e- Sign ) ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (Central Farmer ID) ಸೃಜಿಸಲಾಗುತ್ತದೆ, ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಸಮ್ಮಾನ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳಲ್ಲೂ ಕಡ್ಡಾಯವಾಗಿ ಬಳಸಲಾಗುತ್ತದೆ.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಬರಪರಿಹಾರ, ಬೆಳೆ ವಿಮೆ, ಹಾಗೂ ಪಿ.ಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಕೇಂದ್ರ ನೋಂದಾಯಿತ ರೈತರ ಸಂಖ್ಯೆ (Central Farmer ID)ಯು ಕಡ್ಡಾಯವಾಗಿರುತ್ತದೆ.

ಆದುದರಿಂದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ /ಗ್ರಾಮ ಓನ್ ಕೇಂದ್ರ /ಕಂದಾಯ/ ಕೃಷಿ/ ತೋಟಗಾರಿಕೆ/ ರೇಷ್ಮೆ ಇಲಾಖಾ/ ಕಚೇರಿಗಳನ್ನು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ತಮ್ಮ ಹೆಸರಿನಲ್ಲಿರುವ ಎಲ್ಲಾ ಪಹಣಿಗಳನ್ನು ಇದೇ ಫೆಬ್ರವರಿ. 26 ರ ರೊಳಗಾಗಿ ಕಡ್ಡಾಯವಾಗಿ ಸಂಪರ್ಕಿಸಿ ಇ-ಕೆವೈಸಿ ಮಾಡಿಸುವುದು.

ರೈತರ ವಿದ್ಯುನ್ಮಾನ ಸಹಮತಿ ಪತ್ರ (Digital Farmer Consent With e-Sign) ನೀಡುವುದು. ತಮ್ಮ ಎಲ್ಲಾ ಭೂ ಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ FID ಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕೋರಲಾಗಿದೆ ತಪ್ಪಿದಲ್ಲಿ ಕೇಂದ್ರ / ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಿರೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

12 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

14 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago