2025ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಮೆ ಯೋಜನೆ ಜಾರಿಗೆ ತರಲಾಗಿದೆ.
ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು, ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದ ವಿಮೆಯ ಉದ್ದೇಶವಾಗಿದೆ.
ಜಿಲ್ಲೆಯಲ್ಲಿ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತೆರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ.
ಆಯಾ ತಾಲ್ಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ.
ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಮತ್ತು ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ರವರೆಗೆ ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ.
ರೈತರು ವಿಮೆಗೆ ನೋಂದಾಯಿಸಿಕೊಳ್ಳಲು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಬ್ಯಾಂಕ್ ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸುವುದು.
ರೈತರು ಅಂದಾಜು ಅಥವಾ ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬಹುದು, ಬಿತ್ತನೆ ದೃಢೀಕರಣದ ಅವಶ್ಯಕತೆ ಇರುವುದಿಲ್ಲ. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದ್ದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗಧಿಪಡಿಸಿದ ಅವಧಿಯೊಳಗೆ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಲೆಯನ್ನು ಬದಲಾಯಿಸಬಹುದು.
ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದಾಗಿದೆ.
ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ., ವಿಮಾ ಸೌಲಭ್ಯ ನೀಡುವ ಸಂಸ್ಥೆಯಾಗಿದ್ದು ಟೋಲ್ ಫ್ರೀ ನಂ-1800 425 0505 ಸಂಖ್ಯೆಗೆ ಸಂಪರ್ಕಿಸಬಹುದು.
ವಿಮಾ ಸಂಸ್ಥೆಯ ಜಿಲ್ಲಾ ಮಟ್ಟದ ಪ್ರತಿನಿಧಿಗಳು ಮತ್ತು ಸಂಯೋಜಕರುಗಳಾದ ಅಮೋಘ ವರ್ಷ ಆನಂದ್ ಜಿಲ್ಲಾ ಪ್ರತಿನಿಧಿ ದೂ.ಸಂಖ್ಯೆ:8904088274,
ತಾಲ್ಲೂಕು ಮಟ್ಟದ ಪ್ರತಿನಿಧಿಗಳಾದ
ಚಿರಂಜನ್ ಅರ್.ಎಂ(ದೇವನಹಳ್ಳಿ)ದೂ,ಸಂಖ್ಯೆ:9606173802,
ನಿಶ್ಚಿತಾ ಎಂ(ದೊಡ್ಡಬಳ್ಳಾಪುರ)ದೂ,ಸಂಖ್ಯೆ:8497818723,
ಗುರು ಕಿರಣ್ ಆರ್(ಹೊಸಕೋಟೆ)ದೂ,ಸಂಖ್ಯೆ:6362667097,
ಸಾಗರ್ ಸಿ.ಜೆ(ನೆಲಮಂಗಲ)ದೂ,ಸಂಖ್ಯೆ:8217377255, ಯಶವಂತ ದೂ,ಸಂಖ್ಯೆ:9902545564 ಹಾಗೂ ಅಜಯ್ ವಿರೂಪಾಕ್ಷ ಕಸರ್ ದೂ,ಸಂಖ್ಯೆ:9902944507,ಇವರುಗಳನ್ನು ಸಂಪರ್ಕಿಬಹುದಾಗಿದೆ ಎಂದು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…