Categories: ಕೋಲಾರ

ರೈತರು, ಮಹಿಳೆಯರ ಅಭಿವೃದ್ಧಿಯೇ ನಮ್ಮ ಗುರಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.

ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿ ಇರಲ್ಲ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಅಭಿಪ್ರಾಯಗಳನ್ನು ಪಡೆದು ಪ್ರತಿಯೊಂದು ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ನರೇಗಾ ಸೇರಿದಂತೆ ವಿವಿಧ ಯೋಜನೆಗಳು ಕುರಿತಂತೆ ಪಂಚಾಯತಿ ಮಟ್ಟದ ಅಧಿಕಾರಿಗಳು ಹಳ್ಳಿಗಳಿಗೆ ಹೋಗಿ ಸಾರ್ವಜನಿಕರಿಗೆ ಮನವರಿಕೆಯ ಜೊತೆಗೆ ಯೋಜನೆಗಳ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ಪ್ರಾಸ್ತಾವಿಕವಾಗಿ ಮಾತನಾಡಿ ಜಲಾನಯನ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜಿಲ್ಲೆಯ ಕೋಲಾರ ತಾಲೂಕಿನ ಐದು ಪಂಚಾಯಿತಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಅಂತರ್ಜಲವನ್ನು ವೃದ್ಧಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಇದರ ಸದುಪಯೋಗವನ್ನು ರೈತರು ಪಡಿಸಿಕೊಂಡು ಅಧಿಕಾರಿಗಳೊಂದಿಗೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

9 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

12 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

14 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

17 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

18 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago