ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ನವೆಂಬರ್ 1 ರಿಂದ ಒಂದು ಲೀಟರ್ ಹಾಲಿಗೆ ರೈತರಿಗೆ ನೀಡಲಾಗುತ್ತಿದ್ದ ₹ 2.10 ಪೈಸೆ ಜೊತೆಗೆ ಡಿ.1 ರಿಂದ ಜಾರಿಗೆ ಬರುವಂತೆ ಮತ್ತೆ ₹ 90 ಪೈಸೆ ಸೇರಿ ₹3 ನೀಡಲಾಗುತ್ತಿದೆ. ಇದರಿಂದ ರೈತರಿಗೆ ಗುಣಮಟ್ಟದ ಆಧಾರದ ಮೇಲೆ ಒಂದು ಲೀಟರ್ ಹಾಲಿಗೆ ಒಟ್ಟು ₹38 ಗಳವರೆಗೂ ದೊರೆಯಲಿದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಹೇಳಿದರು.
ಅವರು ಈ ಕುರಿತು ಮಾಹಿತಿ ನೀಡಿ, ಬೆಂಗಳೂರು ಹಾಲು ಒಕ್ಕೂಟಕ್ಕೆ ಪ್ರತಿದಿನ 16 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದೆ. ಇದರಲ್ಲಿ 10 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ರೈತರ ಹಿರಕ್ಷಣೆ ಕಾಪಾಡುವ ಸಲುವಾಗಿ ತಾಲ್ಲೂಕು ಹಾಲು ಉತ್ಪಾದಕರ ಹಿತರಕ್ಷಣಾ ಸಮಿತಿ ರಚಿಸಲಾಗುತ್ತಿದೆ. ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು, ಅಧ್ಯಕ್ಷರು ಸಮಿತಿಯ ಸದಸ್ಯರಾಗಿರುತ್ತಾರೆ.
ತಾಲ್ಲೂಕಿನ ಪ್ರತಿ ಹೋಬಳಿಯಿಂದ ನಾಲ್ಕು ಜನ ಅಧ್ಯಕ್ಷರು ಸಮಿತಿಯಲ್ಲಿ ನಿರ್ದೇಶಕರಾಗಿರಲಿದ್ದಾರೆ. ಸಮಿತಿಯು ಉತ್ಪಾದಕರ ಹಾಗೂ ಒಕ್ಕೂಟದೊಂದಿಗೆ ಕೊಂಡಿಯಾಗಿ ಕೆಲಸ ನಿರ್ವಹಿಸಲಿದೆ ಎಂದರು.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…