ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ನಿರತರಾಗಿರುವ ದೇಶದ ರೈತರ ಅಹವಾಲುಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಶಾಸನ ರೂಪಿಸುವಂತೆ ಒತ್ತಾಯಿಸಿ ಸದನವು ನಿರ್ಣಯ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟ್ರದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ ಎಂದರು.
“ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ನಿರ್ಧರಿಸುವಂತೆ” ಒತ್ತಾಯಿಸಿ, ಭಾರತದಾದ್ಯಂತ ರೈತರು ಚಳುವಳಿ, ಆಂದೋಲನ ಮತ್ತು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ರಾಷ್ಟ್ರದ ಅನ್ನದಾತರೆನ್ನಿಸಿಕೊಳ್ಳುವ ಮತ್ತು ಅರ್ಥವ್ಯವಸ್ಥೆಯ ಸರ್ವಾಂಗೀಣ ಅಭಿವೃದ್ಧಿಯ ಬೇರ್ಪಡಿಸಲಾಗದ ಭಾಗವಾಗಿರುವ ಕೃಷಿಕರ ಆದಾಯವನ್ನು ಸಂರಕ್ಷಿಸುವ ತನ್ಮೂಲಕ ಕೃಷಿಯನ್ನು ಲಾಭದಾಯಕಗೊಳಿಸುವ ಉದ್ದೇಶದಿಂದ ವಾಣಿಜ್ಯ ಬೆಳೆಗಳಿಗೆ ಬೆಲೆ ನಿಗದಿಪಡಿಸುವ ಮಾನದಂಡವನ್ನು ಇತರೆ ಕೃಷಿ ಉತ್ಪನ್ನಗಳಿಗೂ ಅನುಸರಿಸುವ ಕ್ರಮಗಳನ್ನು ಕರ್ನಾಟಕ ಬೆಂಬಲಿಸುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ರೈತ ವಿರೋಧಿ ನೀತಿಯಾಗಿ ರೈತನಿಗೆ ಕನಿಷ್ಠ ಬೆಂಬಲ ಬೆಲೆ ದೊರಕದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿವೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಬಿಜೆಪಿ (BJP) ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುತ್ತದೆ ಎಂದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…