ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು ಕೂಡಲೇ ಸಂಬಂಧಿಸಿದ ಅರಣ್ಯ ಅಧಿಕಾರಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಸಂಘದ ಮುಖಂಡರು ನಗರದ ಜಿಪಂ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಐಕೆಎಸ್ ರಾಜ್ಯ ಮುಖಂಡ ಗೋಪಾಲ್ ಮಾತನಾಡಿ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು, ಕೋಲಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಸ್.ಐ.ಟಿ. ನಿಯಮಾವಳಿ ಪ್ರಕಾರ ಅರಣ್ಯ ಜಮೀನು, ರೈತರ ಜಮೀನು, ಕಂದಾಯ ಇಲಾಖೆ ಜಮೀನು, ಇತರೆ ಜಮೀನುಗಳನ್ನು ತನಿಖೆ ಮಾಡಿ ರಾಜ್ಯ ಮಟ್ಟದ ಎಸ್.ಐ.ಟಿ. ಗೆ ವರದಿ ಮಾಡಲು ಸುಪ್ರೀಂಕೋರ್ಟ್‌ನ ಆದೇಶ ಆಗಿದ್ದು ಜಿಲ್ಲಾಧಿಕಾರಿಗಳ ತಂಡ ಪರಿಶೀಲನೆ ಮಾಡುವುದಕ್ಕೂ ಮೊದಲೇ ದೌರ್ಜನ್ಯದಿಂದ ರೈತರ ಜಮೀನುಗಳಿಗೆ ಬೌಂಡರಿಗಳು ಹಾಕುವುದು, ಬೆಳೆ ನಾಶ ಮಾಡುವುದು ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಅರಣ್ಯ ಇಲಾಖೆಯ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರನ್ನು ಕಳ್ಳರ ರೀತಿಯಲ್ಲಿ ನೋಡುವ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ ಸಾಲ ಮಾಡಿ ಕಟಾವಿಗೆ ಬಂದ ಬೆಳೆಗಳನ್ನು ನಾಶ ಮಾಡಲು ಅವರಿಗೆ ಯಾವ ಅಧಿಕಾರವಿದೆ ತಕ್ಷಣದಿಂದಲೇ ಅರಣ್ಯ ಇಲಾಖೆಯ ದೌರ್ಜನ್ಯವನ್ನು ಎಸ್.ಐ.ಟಿ. ತನಿಖೆ ಆಗುವವರೆಗೂ ನಿಲ್ಲಿಸಬೇಕು ಯಾವುದೇ ಕಾರಣಕ್ಕೂ ಇತ್ಯರ್ಥವಾಗುವ ತನಕ ರೈತರಿಗೆ ತೊಂದರೆ ಕೊಡಬಾರದು ಎಂದು ಒತ್ತಾಯ ಮಾಡಿದರು
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್, ರೈತರಾದ ಶಿಳ್ಳೆಂಗೆರೆ ಶ್ರೀನಿವಾಸ್, ಗಂಗಮ್ಮ, ಜಿ.ಮಂಜುಳ, ಬಿ.ಎ.ಸೈಯದ್ ಪಾರುಕ್, ಚಲಪತಿ, ಹನುಮಪ್ಪ, ಚಂದ್ರಾರೆಡ್ಡಿ, ವೆಂಕಟರಾಮರೆಡ್ಡಿ, ಮಂಜುನಾಥ್ ಮುಂತಾದವರಿದ್ದರು
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…