ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದು, ಈ ಹಿನ್ನೆಲೆ 176 ದಿನಗಳಿಂದ ನಡೆಯುತ್ತಿರುವ ಹೋರಾಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಈ ದಿಸೆಯಲ್ಲಿ ಕೈಗಾರಿಕೆಗಳಿಗೆ ಭೂಮಿ ನೀಡುತ್ತಿರುವ ರೈತರ ತ್ಯಾಗವನ್ನು ಅರ್ಥಮಾಡಿಕೊಂಡು ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆ ನಡೆಸಬೇಕಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಒತ್ತಾಯಿಸಿದ್ದಾರೆ.
ರೈತರ ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ. ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಅದರಂತೆ ಬೆಲೆ ನಿಗದಿ ಮಾಡಬೇಕು ಎಂದರು.
ಈಗ ನಡೆಯುತ್ತಿರುವ 971 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 600 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…