ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ?- ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ. ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲುಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಕಿಂಚಿತ್ತೂ ಕೆಲಸ ಮಾಡದೆ ಇರುವ, ಮೂಲತಹ ರೈತ ವಿರೋಧಿಯಾಗಿರುವ ಬಿಜೆಪಿಯ ನಾಯಕರು ಇಂತಹದ್ದೇ ಅವಕಾಶಕ್ಕಾಗಿ ಕಾದು ಕೂತವರಂತೆ ಶಿವಾನಂದ ಪಾಟೀಲರ ಮಾತುಗಳನ್ನು ವಿವಾದವನ್ನಾಗಿ ಮಾಡಿದ್ದಾರೆ. ಬೀಜ-ಗೊಬ್ಬರ ಕೊಡಿ ಎಂದು ಕೇಳಿದ ರೈತರನ್ನು ಗುಂಡಿಕ್ಕಿ ಸಾಯಿಸಿದ ಮತ್ತು ರೈತರ ಸಾಲಮನ್ನಾ ಮಾಡಿ ಎಂದು ಕೇಳಿದರೆ ನೋಟ್ ಪ್ರಿಂಟಿಂಗ್ ಮೆಷಿನ್ ಇದೆಯೇ ಎಂದು ಕೇಳಿದ ಭಾರತೀಯ ಜನತಾ ಪಕ್ಷದ ನಾಯಕರಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ? ನಾವು ನಿಜವಾದ ರೈತ ಮಿತ್ರರು, ಬಿಜೆಪಿಯವರಂತೆ ನಕಲಿ ಮಿತ್ರರಲ್ಲ. ರೈತರ ಬಗೆಗಿನ ನಮ್ಮ ಪ್ರೀತಿ-ಅಭಿಮಾನಕ್ಕೆ ನಮ್ಮ ಸರ್ಕಾರದ  ಕಳೆದ ಆರು ತಿಂಗಳುಗಳ ಅವಧಿಯಲ್ಲಿ ಜಾರಿಗೆ ತಂದಿರುವ ರೈತ ಪರ ಕಾರ್ಯಕ್ರಮಗಳೇ ಸಾಕ್ಷಿ. ರಾಜ್ಯದಲ್ಲಿನ ಬರಗಾಲದಿಂದ ನೊಂದಿರುವ ರೈತರಿಗೆ ಕೇಂದ್ರ ಸರ್ಕಾರ ಚಿಕ್ಕಾಸಿನ ಪರಿಹಾರ ನೀಡದೆ ಇದ್ದರೂ ನಾವು ಪ್ರತಿ ರೈತ ಕುಟುಂಬಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಿದ್ದೇವೆ. ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಾಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದರು.

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ನೀಡುತ್ತಿದ್ದೇವೆ. ಹದಿನೈದು ವರ್ಷ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಗಳ ಸಕ್ರಮ ಗೊಳಿಸಲು ತೀರ್ಮಾನಿಸಿದ್ದೇವೆ.  ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ 4 ಲಕ್ಷ ಕೃಷಿ ಪಂಪ್ ಸೆಟ್ ಗಳ ಸಕ್ರಮ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ. ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ರೈತರ ಕತ್ತು ಹಿಸುಕಿ ಸಾಯಿಸುವ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದನ್ನು ಇಡೀ ದೇಶ ಕಂಡಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಧಣಿಗಳಿಗೆ ಒತ್ತೆ ಇಡುವ ಬಿಜೆಪಿಯ ಹುನ್ನಾರವನ್ನು ದೇಶದ ರೈತರು ಅರ್ಥಮಾಡಿಕೊಂಡಿದ್ದಾರೆ. ತಮ್ಮ ರೈತ ವಿರೋಧಿ ಕೃತ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಆಗಾಗ ತಿರುಚಿದ ಹೇಳಿಕೆಗಳನ್ನು ಹಿಡ್ಕೊಂಡು ಎದೆ ಬಡಿದುಕೊಳ್ಳುತ್ತಾ ಇರುತ್ತಾರೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

2 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

6 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

22 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago