ರೈತರ ಬೆಳೆಗೆ ಸೂಕ್ತ ಬೆಲೆ ದೊರೆತರೆ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮವಾಗಲು ಸಾಧ್ಯ, ಆ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕಾಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಕೆ.ಎಂ.ಹೆಚ್ ಕನ್ವೆನ್ಷನ್ ಹಾಲ್ ನಲ್ಲಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ದಕ್ಷಿಣಾ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತ ದೇಶದಲ್ಲಿ ರೈತರಿಗೆ ಸಮರ್ಪಕವಾಗಿ ವ್ಯವಸಾಯ ಮಾಡುವಲ್ಲಿ ಸರ್ಕಾರ ಅನೇಕ ಕಾನೂನು ಜಾರಿಗೆ ತಂದರೂ ಅದರ ಅನುಷ್ಠಾನದಲ್ಲಿ ರೈತರಿಗೆ ಅನ್ಯಾಯವಾಗಿದೆ.
ಮಳೆ ಅಭಾವ, ಕೃಷಿ ಕೂಲಿಕಾರರ ಸಮಸ್ಯೆಯಿಂದ ರೈತರು ಆಹಾರ ಧಾನ್ಯ ಬೆಳೆಯುವುದನ್ನೇ ಇತ್ತೀಚೆಗೆ ನಿಲ್ಲಿಸಿದ್ದಾರೆ. ವಾಣಿಜ್ಯ ಬೆಳೆ ಹಾಗೂ ತರಕಾರಿಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಅರಣ್ಯ ನಾಶವು ಕೃಷಿಯ ಮೊದಲ ಋಣಾತ್ಮಕ ಪರಿಣಾಮವಾಗಿದೆ. ಆಧುನಿಕ ಬದುಕಿನಲ್ಲಿ ಬೇಸಾಯದ ಕಡೆ ಗಮನ ನೀಡಬೇಕಾಗಿದೆ. ಕೃಷಿ ಬದುಕು ನಮ್ಮದಾಗಬೇಕು ಎಂದರು.
ನಂತರ ಪ್ರಾಂತ ಕಾರ್ಯದರ್ಶಿ ರಮೇಶ್ ರಾಜ್ ಮಾತನಾಡಿ, ಭಾರತ ದೇಶದಲ್ಲಿ ಕಳೆದ 40 ವರ್ಷಗಳಿಂದ ಕಿಸಾನ್ ಸಂಘ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನಾತ್ಮಕ ಕೆಲಸ ಮಾಡುತ್ತಿದೆ. ಬಹುತೇಕ ರೈತರ ಸಮಸ್ಯೆಯನ್ನು ಇಲಾಖೆಯ ಅಧಿಕಾರಿಗಳು ಸರಿಯಾಗಿದೆ ಸ್ಪಂದಿಸಿದ ಕಾರಣ ನಮ್ಮ ಸಮಿತಿಯು ರೈತರ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…