Categories: ಕೋಲಾರ

ರೈತರ ರಾಗಿ ರಕ್ಷಣೆಗೆ ಉಚಿತ ಟಾರ್ಪಲ್ ವಿತರಿಸುವಂತೆ ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಸರ್ಕಾರದಿಂದ ಬರುವ ಟಾರ್ಪಲ್ ಅನ್ನು ಕಾಳಸಂತೆಯಲ್ಲಿ ಮಾರಾಟ ದಂಧೆಗೆ ಕಡಿವಾಣ ಹಾಕಿ ರಾಗಿ ರಕ್ಷಣೆ ಮಾಡಲು ಕೃಷಿ ಇಲಾಖೆಯಿಂದ ಉಚಿತವಾಗಿ ಟಾರ್ಪಲ್ ವಿತರಣೆ ಮಾಡಿ ಬಡ ರೈತರ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ರಾಗಿ ತೆನೆ ಸಮೇತ ಕೃಷಿ ಇಲಾಖೆ ಮುಂದೆ ಹೋರಾಟ ಮಾಡಿ ಕೃಷಿ ಅಧಿಕಾರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಮುಂಗಾರು ಮಳೆ ಕೈಕೊಟ್ಟು ಹಿಂಗಾರು ಉತ್ತಮ ಮಳೆಯಾಗಿರುವುದರಿಂದ ರಾಗಿ, ನೆಲಗಡಲೆ, ಭತ್ತ ಸಮೃದ್ದಿಯಾಗಿ ಬೆಳೆದು ನಿಂತು ಕಟಾವಿಗೆ ಬಂದಿದ್ದು, ಒಂದು ಕಡೆ ಗ್ರಾಮೀಣ ಪ್ರದೇಶಗಳಲ್ಲಿ ಎತ್ತುಗಳು ಇಲ್ಲದ ಕಾರಣ ಬೆಳೆ ಕಟಾವು ಮಾಡಲು ಕೂಲಿ ಕಾರ್ಮಿಕರ ಕೊರತೆಯಿದ್ದು, ಪರ್ಯಾಯವಾಗಿ ಕೃಷಿ ಇಲಾಖೆಯಿಂದ ಯಂತ್ರೋಪಕರಣಗಳು ಸಿಗದೆ ಇರುವ ಸಮಸ್ಯೆಯಿಂದ ಖಾಸಗಿ ಕಟಾವು ಯಂತ್ರಗಳಿಗೆ ರೈತರು ಪ್ರತಿ ಎಕರೆಗೆ 6 ಸಾವಿರದಿಂದ 10 ಸಾವಿರದವರೆಗೆ ಹಗಲು ದರೋಡೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕಿದ್ದರೂ ಬೆಲೆ ನಿಗದಿಯೂ ಇಲ್ಲ ಕೃಷಿ ಇಲಾಖೆಯಿಂದ ಯಂತ್ರೋಪಕರಣಗಳು ನೀಡದೆ ಅಧಿಕಾರಿಗಳೇ ಖಾಸಗಿ ಮಾಲೀಕರ ಜೊತೆ ಶಾಮೀಲಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ ರಾಗಿ, ಭತ್ತ ಕಟಾವು ಋತುಮಾನದಲ್ಲಿ ಸರ್ಕಾರ ಬಡರೈತರಿಗೆ ಅನುಕೂಲವಾಗಲೆಂದು ಸಾವಿರಾರು ಕೋಟಿ ವೆಚ್ಚದಲ್ಲಿ ಟಾರ್ಪಲ್‌ಗಳನ್ನು ಸಬ್ಸಿಡಿ ದರದಲ್ಲಿ ವಿತರಣೆ ಮಾಡಲು ಜಿಲ್ಲಾ, ತಾಲ್ಲೂಕು ಕೃಷಿ ಇಲಾಖೆಗೆ ರೈತರಿಗೆ ಅವಶ್ಯಕತೆಯಿರುವಷ್ಟು ಟಾರ್ಪಲ್‌ಗಳನ್ನು ಸರಬರಾಜು ಮಾಡುತ್ತಿದ್ದರೂ ಸಮರ್ಪಕವಾಗಿ ರೈತರಿಗೆ ಪದೇ ಪದೇ ಮದ್ಯವರ್ತಿಗಳು ರಾಜಕಾರಣಿಗಳ ಬೆಂಬಲಿಗರಿಗೆ ಮಾತ್ರ ಸರ್ಕಾರದ ಟಾರ್ಪಲ್ ಸಿಗುತ್ತಿದ್ದು, ಬಡ ರೈತರು ಕಚೇರಿಗೆ ಅಲೆದರೂ ಖಾಲಿ ಎಂಬ ನಾಮ ಪಲಕ ನೋಡಿ ವಾಪಸ್ ಆಗುವ ಜೊತೆಗೆ ೩ ತಿಂಗಳ ಕಷ್ಟ ಬೆವರಿನಿಂದ ಬೆಳೆದ ರಾಗಿ, ಭತ್ತ ರಕ್ಷಣೆಗೆ ಸಾವಿರಾರು ಹಣ ನೀಡಿ ಖಾಸಗಿ ಅಂಗಡಿಗಳಲ್ಲಿ ಖರೀದಿ ಮಾಡುವ ಮೂಲಕ ಸರ್ಕಾರದ ಯೋಜನೆಗಳು ಬಡವರಿಗೆ ಸಿಗುತ್ತಿಲ್ಲ ಎಂಬುದು ಸಾಬೀತಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಸಿದರು.

ಮಾನ್ಯರು ಕೂಡಲೇ ಸರ್ಕಾರದಿಂದ ಕೃಷಿ ಇಲಾಖೆಗೆ ಬರುವ ಟಾರ್ಪಲ್‌ಗಳು ಖಾಸಗಿ ಅಂಗಡಿಗಳಿ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಕೃಷಿ ಇಲಾಖೆಯಿಂದ ರಾಜಕೀಯ ಬೆಂಬಲಿಗರಿಗೆ ಹಾಗೂ ದಲ್ಲಾಳಿಗಳಿಗೆ ಹಂಚದೆ ಬಡ ರೈತರಿಗೆ ವಿತರಣೆ ಮಾಡುವ ಮುಖಾಂತರ ರಾಗಿ ಭತ್ತ ರಕ್ಷಣೆ ಮಾಡಬೇಕೆಂದು ಮನವಿ ಮೂಲಕ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಅಧಿಕಾರಿ, ಸರ್ಕಾರದಿಂದ ಬರುವ ಟಾರ್ಪಲ್‌ಗಳನ್ನು ಅರ್ಜಿ ಸಲ್ಲಿಸಿರುವ ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದೆ. ಜೊತೆಗೆ ರಾಜಕೀಯ ವ್ಯಕ್ತಿಗಳ ಒತ್ತಡವೂ ಕಿರಿಯ ಅಧಿಕಾರಿಗಳ ಮೇಲೆ ಇರಬಹುದು ನಮ್ಮ ಗಮನಕ್ಕೆ ಬಂದಿಲ್ಲ ಕೂಡಲೇ ರೈತರಿಗೆ ಅವಶ್ಯಕತೆ ಇರುವ ಟಾರ್ಪಲ್‌ಗಳನ್ನು ವಿತರಣೆ ಮಾಡುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಗೀರೀಶ್, ಪುತ್ತೇರಿ ರಾಜು ರ‍್ನಹಳ್ಳಿ ಆಂಜಿನಪ್ಪ,.ಶೈಲಜಾ ರತ್ನಮ್ಮ ವೆಂಕಟಮ್ಮ ಗೌರಮ್ಮ ಕಂಪಮ್ಮ ಚೌಡಮ್ಮ ಬಾಗ್ಯಮ ಮುಂತಾದವರಿದ್ದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

2 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

22 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago