Categories: ತುಮಕೂರು

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

 

ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಸಾಕಷ್ಟು ವೈಯಕ್ತಿಕ ಕಾಮಗಾರಿಗಳು ಹಾಗೂ ಸಮುದಾಯ ಕಾಮಗಾರಿಗಳನ್ನು ತೆಗೆದುಕೊಳ್ಳಬಹುದಾಗಿದೆ. ಎಲ್ಲಾ ಅರ್ಹ ರೈತರು ತಪ್ಪದೇ ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಸದೃಢ ಜೀವನವನ್ನು ಕಟ್ಟುಕೊಳ್ಳಿ ಎಂದು ಸಾರ್ವಜನಿಕರಿಗೆ ಪಂಚಾಯತಿ ಕಾರ್ಯದರ್ಶಿಗಳಾದ ಹೇಮಂತ್ ಅವರು ರೈತರಲ್ಲಿ ಮನವಿ ಮಾಡಿದರು.

ತಾಲ್ಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಸಿಡ್ಲಹಳ್ಳಿಯಲ್ಲಿ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಸೆಪ್ಟಂಬರ್ 15 ರವರೆಗೆ ಉದ್ಯೋಗ ಚೀಟಿ ಇಲ್ಲದಾ ಎಲ್ಲಾ ರೈತರು ಮತ್ತು ಕೂಲಿಕಾರರು ಹಾಗೂ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ, ಹೊಸ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ತಪ್ಪದೇ ಅರ್ಹರು ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ಪ್ರಧಾನ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದರು.

ಈ ವೇಳೆ ಪಂಚಾಯಿತಿ ಮಾನ್ಯ ಕಾರ್ಯದರ್ಶಿಗಳಾದ ಹೇಮಂತ್ ರವರು, ಕರವಸೂಲಿಕಾರರಾದ ಸತೀಶ್ ಕುಮಾರ್ , ತಾಂತ್ರಿಕ ಸಹಾಯಕರಾದ ಹೊನ್ನೇಶ್ ಬಿ. ಎಸ್ , ಡಿಇಒ ಮುನಿರಾಜು, ಬಿಎಫ್ ಟಿ ಪಾಂಡುರಂಗಯ್ಯ , ಜಿಕೆಎಂ ವಿಜಯಲಕ್ಷ್ಮಿ , ಪಂಚಾಯಿತಿ ಸಿಬ್ಬಂದಿಗಳು,ಎಂಬಿಕೆ, ಸಂಜೀವಿನಿ ಸಂಘದ ಸದಸ್ಯರು, ದವನ ಭೂಮಿಕೆ ಸಾಂಸ್ಕೃತಿಕ ಟ್ರಸ್ಟ್ ಕಲಾವಿದರು, ಸಾರ್ವಜನಿಕರು ಉಪಸ್ಥಿತರಿದ್ದರು.ಪಂಚಾಯಿತಿ ಸಿಬ್ಬಂದಿಗಳು, ಸಂಜೀವಿನಿ ಸಂಘದ ಸದಸ್ಯರು,ದವನ ಭೂಮಿಕೆ ಸಾಂಸ್ಕೃತಿಕ ಟ್ರಸ್ಟ್ ಕಲಾವಿದರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

11 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

17 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

18 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

24 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago