ರೈತರ ಸಮಸ್ಯೆಗಳನ್ನು ಆಲಿಸಿ ಉತ್ತರ ಕೊಡದೇ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಹೊರ ನಡೆದ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಕುಂದು ಕೊರತೆಗಳ ಸಭೆಯಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಠೋಡ್ ಅವರ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಂದಾಯ ಇಲಾಖೆ, ಯೂರಿಯಾ, ರಸಗೊಬ್ಬರ ಸೇರಿದಂತೆ ಇತರೆ ಸಮಸ್ಯೆಗಳನ್ನು ಆಲಿಸುವ ಸಭೆಯನ್ನು ಏರ್ಪಡಿಸಬೇಕು ಎಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ.
ಈ ಹಿನ್ನೆಲೆ ಸೋಮವಾರ ತಹಶೀಲ್ದಾರ್ ನೇತೃತ್ವದಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಇನ್ನೂ ಹತ್ತು ಹಲವಾರು ಸಮಸ್ಯೆಗಳು ಇದ್ದು ಅವುಗಳನ್ನು ಆಲಿಸಿ ಪರಿಹಾರ ಒದಗಿಸುವ ಭರವಸೆ ತಹಶೀಲ್ದಾರ್ ನೀಡಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.
ಒಂದು ವಾರದೊಳಗೆ ಮತ್ತೆ ಸಭೆ ಕರೆದು ರೈತರ ಸಮಸ್ಯೆ ಆಲಿಸಿ ಪರಿಹರಿಸುವ ಭರವಸೆ ನೀಡದಿದ್ದರೆ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯುವ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಡಾ.ಶ್ರೀನಿವಾಸ್, ಸುಲೋಚನಮ್ಮ, ಮುತ್ತೇಗೌಡ, ಸತೀಶ್ ಇದ್ದರು