ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ (ವಿಬಿ-ಜಿ ರಾಮ್ ಜಿ ಯೋಜನೆ) ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುವ ತಾಲ್ಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಗೌರಮ್ಮ ಅವರು ತಿಳಿಸಿದರು.
ತಾಲ್ಲೂಕಿನ ಬರಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಸೆಪ್ಟಂಬರ್ 15 ರವರೆಗೆ ಉದ್ಯೋಗ ಚೀಟಿ ಇಲ್ಲದಾ ಎಲ್ಲಾ ರೈತರು ಮತ್ತು ಕೂಲಿಕಾರರು ಹಾಗೂ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ತಪ್ಪದೇ ಅರ್ಹರು ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ಪ್ರಧಾನ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದರು.
ಯೋಜನೆಯಡಿ ವಾರ್ಷಿಕ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನದ ಕೂಲಿ ಮೊತ್ತವನ್ನೂ 370 ರೂ. ರಿಂದ 382 ರೂ.ಗೆ ಹೆಚ್ಚಿಸಲಾಗಿದೆ.
ಈ ವೇಳೆ ಮಾನ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಗೌರಮ್ಮ ರವರು, ಕಾರ್ಯದರ್ಶಿಗಳಾದ ಕೀರ್ತಿ ರವರು, ತಾಂತ್ರಿಕ ಸಹಾಯಕರಾದ ಅಫ್ತಾಬ್ ಮತ್ತು ಪ್ರಕಾಶ್, ಡಿಇಒ ಪವನ್,ಕರವಸೂಲಿಕಾರರಾದ ತ್ರಿನೇಶ್ ಬಿಎಫ್ ಟಿ ಶೈಲಜ , ಪಂಚಾಯಿತಿ ಸಿಬ್ಬಂದಿಗಳು, ಸಂಜೀವಿನಿ ಸಂಘದ ಸದಸ್ಯರು, ಕಲಾವಿದರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…