Categories: ಕೋಲಾರ

ರೈತ ಸಂಘದಿಂದ ರೈತ ದಿನಾಚರಣೆ: ರಸಾಯನಿಕ ಕೃಷಿ ದೂರವಿಟ್ಟು ಕೃಷಿ ಭೂಮಿ ರಕ್ಷಣೆಗೆ ನಿರ್ಧಾರ

ಕೋಲಾರ; ಮಣ್ಣಿಗೆ ಪೂಜೆ ಮಾಡಿ ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಕಡೆ ಮುಖ ಮಾಡಿ ಎಂಬ ಸಂದೇಶದೊಂದಿಗೆ ಪ್ರಗತಿ ಪರ ರೈತರಿಗೆ ಸನ್ಮಾನ ಮಾಡುವ ಮುಖಾಂತರ ನಗರದ ಕಾಲೇಜು ವೃತ್ತದಲ್ಲಿ ರೈತಸಂಘದಿಂದ ವಿಶ್ವ ರೈತದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ಮನುಷ್ಯ, ಜೀವ ಸಂಕುಲ ಸತ್ತರೆ ಮಣ್ಣಿಗೆ ಸೇರುತ್ತೇವೆ, ಮಣ್ಣೇ ಸತ್ತರೆ ಎಲ್ಲಿಗೆ ಎಂದು ಪ್ರಶ್ನೆ ಮಾಡಿ, ಮಣ್ಣಿನ ಉಳಿವಿಗಾಗಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಉಪಯೋಗಿಸದಂತೆ ಪ್ರತಿಜ್ಞೆ ಮಾಡುವ ಜೊತೆಗೆ ಸಾವಯವ ಕೃಷಿಗೆ ಪ್ರಾಮುಖ್ಯತೆ ನೀಡಿ ಗುಣಮಟ್ಟದ ತರಕಾರಿಗಳನ್ನು ಬೆಳೆದು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಣ್ಣಿನ ಪೂಜೆ ನಂತರ ಗೋಪೂಜೆ, ರಾಗಿ ಭತ್ತ ತರಕಾರಿಗಳಿಗೆ ಪೂಜೆ ಮಾಡಿ ಹಂಚುವ ಮುಖಾಂತರ ರೈತರು ಬೆವರ ಹನಿ ಸುರಿಸಿ ಕಷ್ಟಪಡುವುದು ದೇಶಕ್ಕೆ ಅನ್ನ ಹಾಕುವುದಕ್ಕೆ ಎಂದು ರೈತರ ಕಷ್ಟದ ಬಗ್ಗೆ ಸವಿಸ್ತಾರವಾಗಿ ಹಿತನುಡಿಗಳನ್ನಾಡಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇತ್ತೀಚೆಗೆ ತೋಟಗಾರಿಕಾ ವಿಜ್ಞಾನಿಗಳು ನೀಡಿರುವ ವರದಿ ಇಡೀ ರೈತಕುಲವನ್ನೇ ಕಂಗಾಲಾಗಿಸಿದೆ. ಜಿಲ್ಲೆಯ ರೈತರು ಬೆಳೆಯುವ ತರಕಾರಿಗಳಲ್ಲಿ ವಿಷಕಾರಿ ಅಂಶ ಹೆಚ್ಚಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನೀಡಿರುವ ವರದಿ ಸಂಬಂಧಪಟ್ಟ ಅಧಿಕಾರಿಗಳು ಬಹಿರಂಗಗೊಳಿಸಿ ಕಲುಶಿತಗೊಂಡಿರುವ ಕೃಷಿ ಕ್ಷೇತ್ರ ಸುಧಾರಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತ ಜಾಗೃತಿ ಮೂಡಿಸಬೇಕು ಜೊತೆಗೆ ನಾವೆಲ್ಲರೂ ಸಾವಯುವ ಕೃಷಿ , ಮಿಶ್ರ ಬೆಳೆ ಬೆಳೆಯುವ ಮೂಲಕ ಒತ್ತಾಯಿಸಿದರು.

ರೈತನಾಯಕರಾದ ಪ್ರೊ.ನಂಜುಂಡಸ್ವಾಮಿ, ಪುಟ್ಟಣ್ಣಯ್ಯ ನವರ 80ರ ದಶಕದ ಹೋರಾಟಗಳಂತೆ ನಿರಂತರವಾಗಿ ಜಿಲ್ಲೆಯ ರೈತರ ಪರವಾಗಿ ಹೋರಾಟಗಾರರು ನಿಲ್ಲಬೇಕು. ಜೊತೆಗೆ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು ಸರ್ಕಾರದ ವಿರುದ್ಧ ಹೋರಾಟ ಮಾಡಿ, ಸರ್ಕಾರಿ ಸಂಸ್ಥೆಗಳನ್ನು ಉಳಿಸಿ ಖಾಸಗಿ ಫೈನಾನ್ಸ್ ಹಾವಳಿಯಿಂದ ಗ್ರಾಮೀಣ ಜನರನ್ನು ಉಳಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಮಾತನಾಡಿ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಗ್ರಾಮೀಣ ಪ್ರದೇಶದ ರಸ್ತೆ, ಕುಡಿಯುವ ನೀರು ಮೂಲಭೂತ ಸೌಕರ್ಯಗಳ ಜೊತೆಗೆ ಹದಗೆಟ್ಟಿರುವ ಶಿಥಿಲಗೊಂಡಿರು ಸರ್ಕಾರಿ ಶಾಲೆ, ಅಂಗನವಾಡಿಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಿ ಬಡ, ರೈತ, ಕೂಲಿಕಾರ್ಮಿಕರ ಮಕ್ಕಳ ಶಿಕ್ಷಣವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಾತನಾಡಿ, ಹದಗೆಟ್ಟಿರುವ ಮಣ್ಣಿನ ಫಲವತ್ತತೆ ಹೆಚ್ಚಳ ಮಾಡಿಕೊಳ್ಳಬೇಕು. ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಆದ್ಯತೆ ನೀಡದೇ ಇದ್ದರೆ ಕೋಲಾರ ಜಿಲ್ಲೆಯ ರೈತರ ಕೃಷಿ ಭೂಮಿ ಫಲವತ್ತತೆ ಕಳೆದುಕೊಂಡು ಕೃಷಿಯನ್ನೇ ಮರೆಯಬೇಕಾಗುತ್ತೆ ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ, ಸರ್ಕಾರಗಳು ರೈತಪರ ನಿಲ್ಲಬೇಕು. ರಸ್ತೆ, ಕೈಗಾರಿಕೆ, ಹೆಸರಿನಲ್ಲಿ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವುದನ್ನು ಕೈಬಿಟ್ಟು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್
ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು, ತೂಕ ಮತ್ತು ಅಳತೆ ಅಧಿಕಾರಿ ಪ್ರಭು, ಸಮಾಜ ಸೇವಕ ಕೆ.ಎನ್.ಎನ್ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಜಯ್‌ಕುಮಾರ್, ಗ್ರೇಡ್೨ ತಹಶೀಲ್ದಾರ್ ಹನ್ಸಾ ಮರಿಯಾ, ಚಂದ್ರಪ್ಪ, ಪುಟ್ಟರಾಜು, ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಸುಪ್ರೀಂ ಚಲ, ಕೆ.ಶ್ರೀನಿವಾಸಗೌಡ, ಯಲ್ಲಣ್ಣ, ತರ‍್ನಹಳ್ಳಿ ಆಂಜಿನಪ್ಪ, ಹರೀಶ್, ಪಾರುಕ್‌ಪಾಷ, ಸುನಿಲ್ , ಬಂಗಾರಿ ಮಂಜು, ಶ್ರೀನಿವಾಸ್, ಹೆಬ್ಬಣಿ ಆನಂದರೆಡ್ಡಿ, ಶೈಲಜ, ರತ್ನಮ್ಮ, ಮುನಿರತ್ನ ಶಶಿಕಲಾ ಭಾಗ್ಯಮ್ಮ, ಅನುಷ, ಸುಷ್ಮಾ, ಗಿರೀಶ್, ಚಂದ್ರಪ್ಪ, ನೂರಾರು ರೈತ ಮಹಿಳೆಯರು ಮತ್ತು ರೈತರು ಭಾಗವಹಿಸಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago