ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಬೆಳೆ ವಿಮೆಗೆ ನೊಂದಾಯಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಎಸ್.ಬಿ.ಐ ಜನರಲ್ ಇನ್ಶೂರೆನ್ ಕಂಪನಿ ಲಿಮಿಟೆಡ್ ಇವರ ಸಹಯೋಗದೊಂದಿಗೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಆಸಕ್ತ ರೈತರು ಭೂಮಿ ದಾಖಲೆಗಳಾದ ಪಹಣಿ/ಕಂದಾಯ ರಶೀತಿ/ಖಾತೆ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆದಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬೆಳೆ ವಿಮೆ ಮಾಡಿಸಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ ಎಂಬುದನ್ನು ನೋಡುವುದಾದರೆ….

ರಾಗಿ (ಮಳೆಯಾಶ್ರಿತ) ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 399.2 ರೂ.ಪಾವತಿಸಿದರೆ ವಿಮಾ ಮೊತ್ತ 19,960/- ರೂ. ಪಡೆಯಬಹುದು.

ರಾಗಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 466.4/- ರೂ ಪಾವತಿಸಿದರೆ 23,320/- ವಿಮಾ ಮೊತ್ತ ಪಡೆಯಬಹುದು.

ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 868.8/- ರೂ ಪಾವತಿಸಿದರೆ 43,440/- ರೂ ವಿಮಾ ಮೊತ್ತ ಪಡೆಯಬಹುದು.

ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 609.6/- ರೂ ಪಾವತಿಸಿದರೆ 30,480/- ರೂ ವಿಮಾ ಮೊತ್ತ ಪಡೆಯಬಹುದು.

ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 540/- ಪಾವತಿಸಿದರೆ ವಿಮಾ ಮೊತ್ತ 27,000/- ಪಡೆಯಬಹುದು.

ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 188/- ರೂ ಪಾವತಿಸಿದರೆ ವಿಮಾ ಮೊತ್ತ 9,400/- ಪಡೆಯಬಹುದು.

ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 523/- ಪಾವತಿಸಿದರೆ 26,160/- ವಿಮಾ ಮೊತ್ತ ಪಡೆಯಬಹುದು.

ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 460/- ಪಾವತಿಸಿದರೆ 23,040/- ವಿಮಾ ಮೊತ್ತ ಪಡೆಯಬಹುದು.

ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 482/- ಪಾವತಿಸಿದರೆ 24,120/- ವಿಮಾ ಮೊತ್ತ ಪಡೆಯಬಹುದು.

ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 3396/- ಪಾವತಿಸಿದರೆ ವಿಮಾ ಮೊತ್ತ 67,920/- ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ವಿಮಾ ಸಂಸ್ಥೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರ ಇಲಾಖೆ ಹಾಗೂ ಬೆಳೆ ಸಾಲ ನೀಡುವ ಬ್ಯಾಂಕ್ ಅಥವಾ ಸಹಕಾರಿ ಬ್ಯಾಂಕ್ಗಳನ್ನು ಸಂಪರ್ಕಿಸಲು ಬೆಂಗಳೂರು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

9 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

12 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

15 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

17 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

18 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago