ಗೌರಿಬಿದನೂರು ಮತ್ತು ದೇವರಪಲ್ಲಿ ರೈಲು ನಿಲ್ದಾಣಗಳ ಮಧ್ಯೆ ವಿದುರಾಶ್ವತ್ಥ ಹತ್ತಿರ ಅಪರಿಚಿತ ಮಹಿಳೆ ರೈಲಿಗೆ ಸಿಲುಕಿ ಇಂದು ಮೃತಪಟ್ಟಿದ್ದಾಳೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 11/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ವಯಸ್ಸು ಸುಮಾರು 60 ವರ್ಷವಾಗಿರಬಹುದು, ಮೃತಳ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡನೆಯ ಮುಖ, ತಲೆಯಲ್ಲಿ ಸುಮಾರು ಒಂದು ಅಡಿ ಉದ್ದದ ಕಪ್ಪು- ಬಿಳಿ ಮಿಶ್ರಿತ ತಲೆ ಕೂದಲು ಇದೆ. ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ. ಮೃತಳ ಬಳಿ ಒಂದು ಎಲೆ ಅಡಿಕೆ ಚೀಲ ಇರುತ್ತದೆ.
*ಬಟ್ಟೆಗಳು* – ಪಿಂಕ್ ಕುಂಕಮ ಬಣ್ಣದ ಜಾಕೆಟ್ ನೀಲಿ-ಬಿಳಿ ಮಿಶ್ರಿತ ಹೂ ಡಿಸೈನ್ ವುಳ್ಳ ಬಿಸ್ಕತ್ ಕಲರ್ ಸೀರೆ, ತಿಳಿ ಹಸಿರು ಬಣ್ಣದ ಒಳಲಂಗ ಇದ್ದು ಕಾಲಿನಲ್ಲಿ ಬಿಳಿಯ ಒಂದು ಜೊತೆ ಚಪ್ಪಲಿ ಇದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…