ತೊಂಡೇಭಾವಿ ಮತ್ತು ಗೌರಿಬಿದನೂರು ರೈಲು ನಿಲ್ದಾಣದ ಮಧ್ಯೆ ಗೌರಿಬಿದನೂರಿನ ಶುಗರ್ ಫ್ಯಾಕ್ಟರಿ ಹತ್ತಿರ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ. 21/2025 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಸುಮಾರು 45 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.
*ಚಹರೆ* – 5.5 ಅಡಿ ಎತ್ತರ, ಕಪ್ಪನೆಯ ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು-ಬಿಳಿ ಮಿಶ್ರಿತ ತಲೆ ಕೂದಲು ಮತ್ತು ಗಡ್ಡ ಮೀಸೆ ಇದೆ. ಸಾಧಾರಣವಾದ ನೀಳಕಾಯ ಮೈಕಟ್ಟು,ಹೊಂದಿರುತ್ತಾರೆ.
*ಬಟ್ಟೆಗಳು* – ಗಾಡ ಕಂದು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಇರುತ್ತದೆ.
ವಾರಸುದಾರರು ಯಾರಾದರು ಕಂಡುಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, 9902193960 ಸಂಪರ್ಕಿಸಲು ಕೋರಲಾಗಿದೆ.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…