
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ ರೈಲು ಹಳಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 114/2026ರಡಿ ಕಲಂ 194 ಬಿಎನ್‌ಎಸ್‌ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಮೃತ ವ್ಯಕ್ತಿಯು ಸುಮಾರು 165 ಸೆಂ.ಮೀ. ಎತ್ತರ, ಎಣ್ಣೆಕೆಂಪು ಮೈಬಣ್ಣ, ಕೋಲುಮುಖ, ಸಣ್ಣನೆಯ ಶರೀರ ಹೊಂದಿದ್ದು, ಕಪ್ಪು ಗಡ್ಡ-ಮೀಸೆ ಹಾಗೂ ತಲೆಯಲ್ಲಿ ಕಪ್ಪು ಕೂದಲು ಹೊಂದಿದ್ದಾರೆ. ಎಡ ಎದೆಯ ಮೇಲೆ “ಅನಿತ” ಎಂಬ ಹೆಸರಿನೊಂದಿಗೆ ಸ್ಟಾರ್ ಗುರುತಿನ ಹಚ್ಚೆ ಇದೆ.
ಮೃತರು ಪಿಂಕ್ ಬಣ್ಣದ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.
ಮೃತರ ಗುರುತು ಅಥವಾ ಅವರ ವಾರಸುದಾರರ ಬಗ್ಗೆ ಮಾಹಿತಿ ತಿಳಿದಿರುವವರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 9108630967, 9902193960 ಅಥವಾ ರೈಲ್ವೆ ಪಿಎಸ್‌ಐ 9480802118 ಸಂಪರ್ಕಿಸುವಂತೆ ರೈಲ್ವೆ ಪೊಲೀಸರು ಮನವಿ ಮಾಡಿದ್ದಾರೆ.