ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ ರೈಲು ಹಳಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 114/2026ರಡಿ ಕಲಂ 194 ಬಿಎನ್‌ಎಸ್‌ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಮೃತ ವ್ಯಕ್ತಿಯು ಸುಮಾರು 165 ಸೆಂ.ಮೀ. ಎತ್ತರ, ಎಣ್ಣೆಕೆಂಪು ಮೈಬಣ್ಣ, ಕೋಲುಮುಖ, ಸಣ್ಣನೆಯ ಶರೀರ ಹೊಂದಿದ್ದು, ಕಪ್ಪು ಗಡ್ಡ-ಮೀಸೆ ಹಾಗೂ ತಲೆಯಲ್ಲಿ ಕಪ್ಪು ಕೂದಲು ಹೊಂದಿದ್ದಾರೆ. ಎಡ ಎದೆಯ ಮೇಲೆ “ಅನಿತ” ಎಂಬ ಹೆಸರಿನೊಂದಿಗೆ ಸ್ಟಾರ್ ಗುರುತಿನ ಹಚ್ಚೆ ಇದೆ.
ಮೃತರು ಪಿಂಕ್ ಬಣ್ಣದ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.

ಮೃತರ ಗುರುತು ಅಥವಾ ಅವರ ವಾರಸುದಾರರ ಬಗ್ಗೆ ಮಾಹಿತಿ ತಿಳಿದಿರುವವರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 9108630967, 9902193960 ಅಥವಾ ರೈಲ್ವೆ ಪಿಎಸ್‌ಐ 9480802118 ಸಂಪರ್ಕಿಸುವಂತೆ ರೈಲ್ವೆ ಪೊಲೀಸರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

19 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

20 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago