ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಇರುವ ಶ್ರೀರಾಮನಹಳ್ಳಿ ಹತ್ತಿರ  ಅಪರಿಚಿತ ಶವ ಪತ್ತೆಯಾಗಿದೆ.

ಅಪರಿಚಿತ ಮೃತ ವ್ಯಕ್ತಿಗೆ ಸುಮಾರು 35 ರಿಂದ 40 ವರ್ಷ ವಯಸ್ಸು ಆಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 87/2024 ಕಲಂ 174 Cr.P.C ರೀತ್ಯಾ  ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

*ಚಹರೆ* – 5.5 ಅಡಿ ಎತ್ತರ, ಎಣ್ಣೆಗೆಂಪು, ತಲೆಯಲ್ಲಿ ಸುಮಾರು 1 .1/2 ಇಂಚು ಉದ್ದದ ಕಪ್ಪು ಕೂದಲು, ದುಂಡು ಮುಖ ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ. ಬಿಳಿ &ಕ ಪ್ಪು ಗಡ್ಡ ಮೀಸೆ ಹೊಂದಿರುತ್ತಾನೆ.

*ಬಟ್ಟೆಗಳು* – ಪಿಸ್ತಾ ಹಸಿರು ಬಣ್ಣದ ಟೀ ಶರ್ಟ್ ಹಾಗೂ ಕೆಂಪು ಬಣ್ಣದ ಟೀ ಶರ್ಟ್ ಧರಿಸಿದ್ದು,  ಕಪ್ಪು ಬಣ್ಣದ ಹರಿದ  ನೈಟ್ ಪ್ಯಾಂಟ್, ನಿಲಿ ಬಣ್ಣದ ಒಳ ಉಡುಪು, ಕಪ್ಪುಬಣ್ಣದ  ಒಂದು ಜೋತೆ ಚಪ್ಪಲಿ, ಕೇಸರಿ ಬಣ್ಣದ ಟವೆಲ್ ಇದ್ದು, ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118 ಹಾಗೂ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್  9480802143 ಮೊಬೈಲ್‌ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

15 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

22 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

1 day ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago