ತಾಲ್ಲೂಕಿನ ವಡ್ಡರಹಳ್ಳಿ ಮತ್ತು ಮಾಕಳಿದುರ್ಗ ರೈಲು ನಿಲ್ದಾಣಗಳ ಮಧ್ಯೆ ಘಾಟಿ ಗೋಶಾಲೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು (30), ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 91/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತನ ಹೆಸರು ವಿಳಾಸ ತಿಳಿದುಬಂದಿರುವುದಿಲ್ಲ.
ಚಹರೆ – 5.5ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು, ದುಂಡು ಮುಖ ಇದ್ದು, ಕಪ್ಪು ಗಡ್ಡ ಮೀಸೆ, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ.
ಬಟ್ಟೆಗಳು – ಬಿಳಿ ಬಣ್ಣದ ಹೂ ಡಿಸೈನ್ ಶರ್ಟ್, ಬೂದು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಸಿಮೆಂಟ್ ಕಲರ್ ಅಂಡರ್ವೆರ್, ಗಿಳಿ ಹಸಿರು ಬಣ್ಣದ ಒಳ ಟೀ ಶರ್ಟ, ಕೆಂಪುಪಟ್ಟಿಯ ಬಿಳಿ ಬಣ್ಣದ ಚಪ್ಪಲಿಗಳು ಇದ್ದು ತಲೆ ಕೂದಲು ಮತ್ತು ಬಟ್ಟೆಯ ಮೇಲೆ ಪೈಂಟ್ ಕಲೆ ಇರುತ್ತದೆ. ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143, ಸಂಪರ್ಕಿಸಲು ಕೋರಿದೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…