ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ ನಡೆದಿದೆ.

ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸ ಈವರೆಗೂ ಪತ್ತೆಯಾಗಿಲ್ಲ. ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತನ ಚಹರೆ: ಸುಮಾರು 165 ಸೆಂ.ಮೀ ಎತ್ತರ, ಗೋಧಿ ಮೈಬಣ್ಣ, ದುಂಡನೆಯ ಮುಖ, ದಪ್ಪ ಮೂಗು, ಸಣ್ಣನೆಯ ಶರೀರ, ಕಪ್ಪು ಗಡ್ಡ–ಮೀಸೆ ಹಾಗೂ ಕಪ್ಪು ಕೂದಲು ಹೊಂದಿದ್ದಾನೆ. ಬಲಗೈ ಮೇಲೆ ಶಿವನ ತ್ರಿಶೂಲ ಮತ್ತು “ರಾಹುಲ್” ಎಂಬ ಹಚ್ಚೆ ಗುರುತು ಇದೆ.

ಧರಿಸಿದ್ದ ಬಟ್ಟೆ: ಸಿಮೆಂಟ್ ಬಣ್ಣದ ಟೀಶರ್ಟ್, ಬಿಳಿ ಬಣ್ಣದ ಜೀನ್ಸ್ ಪ್ಯಾಂಟ್, ಕಪ್ಪು ಬಣ್ಣದ ಅಂಡರ್‌ವೇರ್ ಹಾಗೂ ಒಳಬನಿಯನ್ ಧರಿಸಿದ್ದಾನೆ.

ಮೃತ ವ್ಯಕ್ತಿಯ ವಾರಸುದಾರರು ಅಥವಾ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್: 9108630967, 9902193960 ಹಾಗೂ ರೈಲ್ವೆ ಪಿಎಸ್‌ಐ: 9480802118 ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

41 minutes ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

13 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

19 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago