ರೈಲು ಹಳಿಯಲ್ಲಿ ಅಪರಿಚಿತ ಮಹಿಳೆ ಸಾವು

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪದ ರೈಲು ಹಳಿಯಲ್ಲಿ ಸುಮಾರು 50 ವರ್ಷದ ಅಪರಿಚಿತ ಮಹಿಳೆಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ UDR ನಂ.108/2026ರಡಿ ಕಲಂ 194 BNSS ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಮೃತ ಮಹಿಳೆಯ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಮಹಿಳೆ ಸುಮಾರು 165 ಸೆಂ.ಮೀ ಎತ್ತರ, ಎಣ್ಣೆ ಕೆಂಪು ಮೈಬಣ್ಣ, ಕೋಲುಮುಖ ಹಾಗೂ ಸಣ್ಣಕಾಯ ಹೊಂದಿದ್ದು, ತಲೆಯಲ್ಲಿ ಸುಮಾರು ಒಂದೂವರೆ ಅಡಿ ಉದ್ದದ ಕಪ್ಪು-ಬಿಳಿ ಮಿಶ್ರಿತ ಕೂದಲು ಹೊಂದಿದ್ದಾರೆ.

ಮಹಿಳೆ ನೇರಳೆ (ಪರ್ಪಲ್) ಬಣ್ಣದ ಚೂಡಿದಾರ್ ಟಾಪ್ ಹಾಗೂ ಕಪ್ಪು ಬಣ್ಣದ ಹೂವಿನ ವಿನ್ಯಾಸದ ಚೂಡಿದಾರ್ ಪ್ಯಾಂಟ್ ಧರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ಮಹಿಳೆಯ ವಾರಸುದಾರರು ಅಥವಾ ಸಂಬಂಧಿಕರ ಬಗ್ಗೆ ಮಾಹಿತಿ ಇರುವವರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ (ಮೊ. 9108630967, 9902193960) ಅಥವಾ ರೈಲ್ವೆ ಪಿಎಸ್‌ಐ (ಮೊ. 9480802118) ಅವರನ್ನು ಸಂಪರ್ಕಿಸುವಂತೆ ರೈಲ್ವೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

16 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

18 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

19 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

23 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago