ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಪ್ರಾಣಿಗಳು ಮಣ್ಣು ತೋಡಿದ ಪರಿಣಾಮ ಶಿಶುವಿನ ಮೃತದೇಹ ಮೇಲಕ್ಕೆ ಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮುತ್ತುರಾಜ್ ಎಚ್ ಹಾಗೂ ಡಿವೈಎಸ್ಪಿ ಪಾಂಡುರಂಗ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳದಲ್ಲಿ ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಲಾಗಿದೆ. ಯಾರೋ ಅಪರಿಚಿತರು ನವಜಾತ ಶಿಶುವಿನ ಮೃತದೇಹವನ್ನು ತಂದು ಅಲ್ಲೇ ಹೂತುಹಾಕಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸದ್ಯ ಶಿಶುವಿನ ತಾಯಿ ಯಾರು, ಯಾವ ಸಂದರ್ಭದಲ್ಲಿದು ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ಸಹಾಯವಾಣಿ ಅಧಿಕಾರಿಗಳೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳದ ಸಮೀಪವೇ ಪಿಜಿ (ಪೇಯಿಂಗ್ ಗೆಸ್ಟ್) ವಸತಿ ಗೃಹಗಳಿರುವ ಹಿನ್ನೆಲೆಯಲ್ಲಿ, ಆರೋಪಿಗಳ ಸುಳಿವು ಪತ್ತೆಹಚ್ಚುವ ಉದ್ದೇಶದಿಂದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಘಟನೆಯ ಕುರಿತು ಸಮಗ್ರ ತನಿಖೆ ಮುಂದುವರಿದಿದ್ದು, ಶಿಶುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 hour ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

14 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

17 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

19 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

22 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

23 hours ago