ಮಾಕಳಿ ದುರ್ಗಾ ಸಮೀಪದ ರೈಲ್ವೆ ಮೇಲ್ಸೇತುವೆಯ ತಡೆಗೋಡೆಗೆ ಆಯಾತಪ್ಪಿ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದಿರುವ ಘಟನೆ ಇಂದು ಸಂಜೆ ನಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರ ಸಹಾಯದಿಂದ ಆಂಬುಲೆನ್ಸ್ ಮೂಲಕ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತಕ್ಕೆ ಒಳಗಾದ ಬೈಕ್ ಸವಾರನ ವಿಳಾಸ, ಹೆಸರು ಇನ್ನೂ ತಿಳಿದು ಬಂದಿರುವುದಿಲ್ಲ, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.