ದೊಡ್ಡಬಳ್ಳಾಪುರ ತಾಲ್ಲೂಕಿನ ರೈ ಯೂನಿರ್ವಸಿಟಿ ಬಳಿ ಭೀಕರ ಅಪಘಾತವಾಗಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬೈಕ್ ಸವಾರರು ದೊಡ್ಡಬಳ್ಳಾಪುರದಿಂದ ಮಧುರೆ ಕಡೆ ಹೋಗುವ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಲಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರರು ಕೂಡಲೇ ಬೈಕ್ ಸಮೇತ ಕೆಳಗಡೆ ಬಿದ್ದಿದ್ದಾರೆ.
ಓರ್ವ ಎದುರು ಬರುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಳಾಗಿವೆ. ಕೂಡಲೇ ಗಾಯಾಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ದೊಡ್ಡಬೆಳವೆಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….