ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಜಿ. ಲಕ್ಷ್ಮೀಪತಿ, ವೈದ್ಯಾಧಿಕಾರಿ ಡಾ. ಫರ್ಹಾನಾ ಅವರು ಆಸ್ಪತ್ರೆಗೆ ಬರುವ ರೈತರು ಹಾಗೂ ಸಾರ್ವಜನಿಕರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ. ತಲೆನೋವು, ಜ್ವರ, ಕೆಮ್ಮು, ನೆಗಡಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳೊಂದಿಗೆ ಏಕವಚನದಲ್ಲಿ ಮಾತನಾಡಿ ಅವಮಾನಿಸುತ್ತಾರೆ ಎಂದು ಆರೋಪಿಸಿದರು.

ಪ್ರತಿದಿನ ಸುಮಾರು ಹತ್ತು ದೂರುಗಳು ವೈದ್ಯಾಧಿಕಾರಿಯ ವರ್ತನೆ ಕುರಿತು ಬರುತ್ತಿವೆ. ಹೆಚ್ಚಿನ ಪ್ರಶ್ನೆ ಕೇಳಿದರೆ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ರೋಗಿಗಳಿಗೆ ಬೆದರಿಕೆ ಹಾಕುತ್ತಾರೆ. ಸಾರ್ವಜನಿಕರೊಂದಿಗೆ ಕನಿಷ್ಠ ಸೌಜನ್ಯದಿಂದ ವರ್ತಿಸದ ಇಂತಹ ವೈದ್ಯರು ನಮ್ಮೂರಿಗೆ ಬೇಡ. ಅವರನ್ನು ತಕ್ಷಣವೇ ವರ್ಗಾವಣೆ ಮಾಡಿ ಹೊಸ ವೈದ್ಯರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಈ ಸಂಬಂಧ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ಸಲ್ಲಿಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶಾರದಾ ಗ್ರಾಮಸ್ಥರ ಅಹವಾಲು ಆಲಿಸಿದರು. ಬಳಿಕ ಮಾತನಾಡಿ, ವೈದ್ಯಾಧಿಕಾರಿಯ ವಿರುದ್ಧ ಈ ಹಿಂದೆಯೂ ಇಂತಹ ದೂರುಗಳು ಬಂದಿದ್ದವು. ವರ್ತನೆ ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ಇದೇ ರೀತಿಯ ಘಟನೆಗಳು ಪುನರಾವರ್ತನೆಯಾಗುತ್ತಿರುವುದು ಸರಿಯಲ್ಲ. ಗ್ರಾಮಸ್ಥರ ಮನವಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ವರದಿ ಸಲ್ಲಿಸಿ ಮುಂದಿನ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಪಿಡಿಓ ಕಾಂತರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜ್ಯೋತಿ, ಚಾಂದಿನಿ ಹಾಗೂ ಗ್ರಾಮಸ್ಥರಾದ ಆನಂದ್, ರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 minutes ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 hour ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

4 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

4 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

6 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

11 hours ago