ರೋಚಕ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ ಟೀಮ್ ಇಂಡಿಯಾ:, ಟಿ-20 ಕ್ರಿಕೆಟ್ ಗೆ ಭಾರತವೇ ಬಾಸ್!

ವಿಶ್ವಕಪ್ ಕಾಯುವಿಕೆಗೆ ತೆರೆ ಬಿದ್ದಿದೆ, 17 ವಷ೯ಗಳ ನಂತರ ಭಾರತ ತಂಡ ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸು ಮಾಡುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

ಅತ್ಯಂತ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮಾಕ್ರಂ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಭರ್ಜರಿ ಜಯ ಸಾಧಿಸಿದರು.

ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ಆಸರೆಯಾಗಿ ನಿಂತವರು ವಿರಾಟ್ ಕೊಹ್ಲಿ (76) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ (47) ಉತ್ತಮ ಜೊತೆಯಾಟ ಹಾಗೂ ಶಿವಂ ದುಬೆ (27) ರನ್ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

176 ರನ್ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಅನುಭವಿಸಿದರೂ ಸಹ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟಾನ್ ಡಿ ಕಾಕ್ (39), ಸ್ಟಬ್ಸ್(31), ಕ್ಲಾಸನ್ (52) ಹಾಗೂ ಡೇವಿಡ್ ಮಿಲ್ಲರ್ (21) ರನ್ ಗಳಿಸಿ ಗೆಲುವಿನ ದಡಕ್ಕೆ ಬಂದು ನಿಲ್ಲಿಸಿದರು.

ಆದರೆ, ಭಾರತದ ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಬುಮ್ರಾ, ಅಶ೯ದೀಪ್ ಹಾಗೂ ಹಾದಿ೯ಕ್ ಪಾಂಡ್ಯ ದಕ್ಷಿಣ ಆಫ್ರಿಕಾದ ಕಡೆ ವಾಲುತ್ತಿದ್ದ ಪಂದ್ಯವನ್ನು ಕಸಿದುಕೊಂಡರು.

ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಮಾಡಿದ ಜಸ್ಪ್ರಿತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು, ಫೈನಲ್ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಟಿ-ಟ್ವೆಂಟಿ ಕ್ರಿಕೆಟ್ ಗೆ ವಿದಾಯ ಹೇಳುವ ಮೂಲಕ ತಮ್ಮ ವರ್ಣರಂಜಿತ ಟಿ-ಟ್ವೆಂಟಿ ಕ್ರಿಕೆಟ್ ಗೆ ತೆರೆ ಎಳೆದರು.

ಕನ್ನಡಿಗ ರಾಹುಲ್ ದ್ರಾವಿಡ್ ಅವರು ಆಟಗಾರನಾಗಿ ಕಪ್ ಗೆಲ್ಲುವಲ್ಲಿ ವಿಫಲರಾದರೂ ಸಹ ಭಾರತ ತಂಡದ ಕೋಚ್ ಆಗಿ ಟಿ-ಟ್ವೆಂಟಿ ವಿಶ್ವಕಪ್ ಗೆಲ್ಲಿಸುವಲ್ಲಿ ಸಫಲರಾಗಿದ್ದಾರೆ.

Leave a Reply

Your email address will not be published. Required fields are marked *