ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.
ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು
ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…