Categories: ಕೋಲಾರ

ರೋಟರಿ ಸಂಸ್ಥೆಯ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನದ ಜಾಗೃತಿ ಜಾಥಾ

ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ ಜ್ಯೋತಿ ಪಬ್ಲಿಕ್ ಶಾಲೆಯಿಂದ ಪ್ರಾರಂಭವಾಗಿ ಹೊಸ ಬಸ್ ನಿಲ್ದಾಣ, ಅಂತರಗಂಗೆ ರಸ್ತೆ, ಸೇರಿದಂತೆ ಕೀಲುಕೋಟೆಯ ಮುಖಾಂತರ ಸಾಗಿ ಸಾರ್ವಜನಿಕರಲ್ಲಿ ಪೋಲಿಯೋ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಬಹಳ ದೊಡ್ಡ ಪಾತ್ರವನ್ನು ವಹಿಸಿದೆ ಜಗತ್ತಿನಾದ್ಯಂತ ಜಾಗತಿಕ ಪಿಡುಗಾಗಿದ್ದ ಪೋಲಿಯೋ ನಿರ್ಮೂಲನೆ ಮಾಡಲು ರೋಟರಿ ಸಂಸ್ಥೆ 1985ರಲ್ಲಿ ಪಣ ತೊಟ್ಟಿತು. ಜಗತ್ತಿನಾದ್ಯಂತ ಸರ್ಕಾರಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆಯಲ್ಲಿ ಕೈಜೋಡಿಸಿ ಪೋಲಿಯೋ ನಿರ್ಮೂಲನೆ ಮಾಡಲು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಯಶಸ್ವಿಯಾಗಿದೆ ಎಂದರು.

ಮನುಷ್ಯನ ಅಂಗವಿಕಲತೆಯನ್ನು ಹೋಗಲಾಡಿಸಲು ಪಲ್ಸ್ ಪೋಲಿಯೊ ಸಹಕಾರಿಯಾಗಿದೆ ಅದರಿಂದಲೇ ವಿಶ್ವವನ್ನು ಪೋಲಿಯೊ ಮುಕ್ತಗೊಳಿಸಲು ಸಂಕಲ್ಪ ತೊಟ್ಟಿದೆ ಇದರ ಗುರಿ ಸಾಧನೆಗೆ ನಿರಂತರವಾಗಿ ಸಾರ್ವಜನಿಕರು ತಮ್ಮ ಜವಾಬ್ದಾರಿ ಎನ್ನುವ ರೀತಿಯಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ವಿಧ್ಯಾರ್ಥಿಗಳು ಸಹ ಇಂತಹ ವಿಚಾರಗಳ ಬಗ್ಗೆ ತಮ್ಮ ಮನೆಗಳಲ್ಲಿ ಮನವಿ ಮಾಡಿಸಬೇಕು ಪೋಲಿಯೊ ಮುಕ್ತ ರಾಷ್ಟ್ರವಾಗಿ ಮಾಡಲು ಮಾರ್ಚ್ ೩ ರಂದು ತಮ್ಮ ಮನೆಯ ಮತ್ತು ಸುತ್ತಮುತ್ತಲಿನಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಅರೋಗ್ಯ ಅಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು 2014 ರಲ್ಲೇ ಭಾರತವನ್ನು ಪೊಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ. ಆದರೆ, ನೆರೆಯ ರಾಷ್ಟ್ರಗಳಲ್ಲಿ ಕೆಲ ಪೋಲಿಯೊ ಪ್ರಕರಣಗಳು ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಇನ್ನೂ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಅಭಿಯಾನ ಆಶಯ ಈಡೇರಿಕೆಗೆ ಸಹಕರಿಸಬೇಕು ಎಂದರು

ಈ ಸಂದರ್ಭದಲ್ಲಿ ಕೋಲಾರ ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ವಿಶ್ವನಾಥ್, ಸೇವಾದಳ ಜಿಲ್ಲಾ ಅಧ್ಯಕ್ಷ ಕೆ.ಎಸ್ ಗಣೇಶ್, ಬಲಿಜ ಸಂಘದ ತೋಟಗಳ ಅಶೋಕ್, ರೋಟರಿ ಸಂಸ್ಥೆಯ ಸುಧಾಕರ್, ರಮೇಶ್, ಅಮರಾ ಜ್ಯೋತಿ ಶಾಲೆಯ ಮುಖ್ಯಸ್ಥ ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

13 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

18 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

21 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago