ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ: ತಮ್ಮ ಶೀಘ್ರ ಚೇತರಿಕೆಯ ಅನುಭವ ಹಂಚಿಕೊಂಡ ಸಚಿವ

ಬೆಂಗಳೂರು: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲು ಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು, ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು. ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು, ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ರೋಬೋಟ್‌ ನೆರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬುದು ನನ್ನ ಅನಿಸಿಕೆ. ಇಲ್ಲಿನ ವೈದ್ಯ ತಂಡವು ಸಹ ಸೂಕ್ತ ಮಾಹಿತಿಯೊಂದಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಉತ್ತಮ ರೀತಿಯಲ್ಲಿ ನನ್ನ ಕ್ಷೇಮಸಮಾಚಾರ ನೋಡಿಕೊಂಡರು ಎಂದು ಹೇಳಿದರು.

ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಪ್ರತಿಯೊಬ್ಬರು ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮದ ಅಡಿ ಭಾಗಿಯಾಗಿರುವುದು ಸಾಕಷ್ಟು ಜನರಿಗೆ ಸ್ಪೂರ್ತಿದಾಯಕವಾಗಿದೆ. ಹಲವರು ಮೊಣಕಾಲು ನೋವಿನಿಂದ ಬಳಲುತ್ತಿದ್ದರೂ, ಶಸ್ತ್ರಚಿಕಿತ್ಸೆಯ ಬೀತಿಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ನೋವಿನಲ್ಲೇ ನರಳುತ್ತಿರುತ್ತಾರೆ, ನಮ್ಮಂತಹ ನೂರಾರು ಜನರ ಅನುಭವವು ಬೇರೆಯವರಿಗೆ ಸ್ಪೂರ್ತಿಯಾಗಲಿ ಎಂದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ವಿ.ವಿ. ಚಿನಿವಾಲರ್‌ ಮಾತನಾಡಿ, ನಾನೂ ಸಹ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು, ಚೇತರಿಕೆ ಕಂಡಿದ್ದೇನೆ, ವೈದ್ಯಕೀಯ ಲೋಕದಲ್ಲಿ ರೋಬೋಟ್‌ನ ಆಗಮನ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಮಾತನಾಡಿ, ಇಂದು ರೋಬೋಟ್‌ ನೆರವು ವೈದ್ಯಲೋಕದಲ್ಲಿ ಹೊಸ ಅದ್ಯಾಯ ಸೃಷ್ಟಿಸಿದೆ. ಅದರಲ್ಲೂ ಮೊಣಕಾಲು, ಸೊಂಟ ಇತರೆ ಕೀಲು ಬದಲಾವಣೆಗೆ ರೋಬೋಟ್‌ ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ. ಹೀಗಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮ ಚಾಲನೆ ನೀಡಿದ್ದೇನೆ. ಫೋರ್ಟಿಸ್ ಸ್ಟ್ರೈಡ್ ಎನ್ನುವುದು ಕೀಲು ಆರೋಗ್ಯ ಸವಾಲುಗಳಿಂದ ಪ್ರಭಾವಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಬೆಂಬಲ ಗುಂಪಾಗಿದೆ. ಇದು ಅನುಭವಗಳನ್ನು ಹಂಚಿಕೊಳ್ಳಲು, ತಜ್ಞರ ಒಳನೋಟಗಳನ್ನು ಪಡೆಯಲು ಮತ್ತು ಸುಧಾರಿತ ಚೇತರಿಕೆಗಾಗಿ ಅಮೂಲ್ಯವಾದ ಮಾರ್ಗದರ್ಶನವನ್ನು ಪಡೆಯುವ ವೇದಿಕೆಯಾಗಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 hour ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

4 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

16 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

19 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

22 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

1 day ago