ಇಂದೋರ್ : ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ದ್ವಿಶತಕದ ಜೊತೆಯಾಟದ ಜೊತೆಗೆ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ಬಲದಿಂದ ಕೊನೆಯ ಪಂದ್ಯದಲ್ಲಿ 90 ರನ್‌ಗಳ ಅಂತರದಿಂದ ಗೆದ್ದು ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ನಂಬರ್ ಒನ್ ಸ್ಥಾನ ತನ್ನದಾಗಿಸಿಕೊಂಡಿತು.
ಮದ್ಯಪ್ರದೇಶದ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ತಂಡದ ನಾಯಕ ಟಾಮ್ ಲ್ಯಾಥಮ್ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸುವ ಮೂಲಕ ರೋಹಿತ್ ಶರ್ಮಾ ಪಡೆಯನ್ನು ಕಟ್ಟಿಹಾಕುವ ಆಲೋಚನೆಯಲ್ಲಿದ್ದರು.
ಪ್ರವಾಸಿ ತಂಡದ ಆಹ್ವಾನದ ಮೇರೆಗೆ ಬ್ಯಾಂಕಿಂಗ್ ಗೆ ಬಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 13 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 112 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಜೊತೆಯಾಟದಲ್ಲಿ 212 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.
ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದ ಸ್ಪಿನ್ನರ್ ಬ್ರೈಸ್ ವೆಲ್ ಮೊದಲ ಬ್ರೇಕ್ ನೀಡಿದರು, ನಂತರ ಶುಭ್ಮಮನ್ ಗಿಲ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ವಾಶಿಂಗ್ಟನ್ ಸುಂದರ್ ಬೇಗನೇ ವಿಕೆಟ್ ಒಪ್ಪಿಸಿದರು.
ಈ ಸಂದರ್ಭದಲ್ಲಿ ಜೊತೆಯಾದ ಉಪನಾಯಕ ಹಾರ್ದಿಕ್ ಪಾಂಡ್ಯ(54) ಹಾಗೂ ಆಲ್ ರೌಂಡರ್ ಲಾಡ್೯ ಶಾದು೯ಲ್ ಠಾಕೂರ್ (25) ರನ್ ಗಳಿಸಿ ತಂಡದ ಮೊತ್ತವನ್ನು 385ರ ಗಡಿ ದಾಟಿಸಿ ಬೃಹತ್ ಮೊತ್ತ ಕಲೆ ಹಾಕಿದರು, ನ್ಯೂಜಿಲೆಂಡ್ ಪರ ಫರ್ಗುಸನ್ ಹಾಗೂ ಜಾಕೋಬ್ ತಲಾ 3 ವಿಕೆಟ್ ಪಡೆದು ಗಮನ ಸೆಳೆದರು.
ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡ ರನ್ ಗಳಿಸುವ ಮೊದಲೇ ಫಿನ್ ಅಲೆನ್ (0) ಅವರಿಗೆ ಹಾರ್ದಿಕ್ ಪಾಂಡ್ಯ ಪೆವಿಲಿಯನ್ ದಾರಿ ತೋರಿಸಿದರು, ನಂತರ ಒಂದಾದ ಕಾನ್ವೆ 12 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (138)ರನ್ ಗಳಿಸಿದರೆ ನಿಕೊಲಾಸ್ 42 ರನ್ ಗಳಿಸಿ ಎರಡನೇ ವಿಕೆಟ್‍ಗೆ 106 ರನ್ ಗಳಿಸುವ ಮೂಲಕ ಆಸರೆಯಾದರು.
ಡೇನಿಯಲ್ ಮಿಚೆಲ್, ಸ್ಯಾಂಟ್ನರ್ ಹಾಗೂ ಬ್ರೆಸ್ವೆಲ್ ಅಲ್ಪ ಪ್ರಮಾಣದ ಪ್ರತಿರೋಧ ತೋರಿದರೂ ಸಹ 295 ರನ್ ಗಳಿಸಲಷ್ಟೇ ಸಾಧ್ಯವಾಯಿತು, ಭಾರತದ ಪರವಾಗಿ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರಿಗೆ 3 ವಿಕೆಟ್ ಹಾಗೂ ಯಜುವೇಂದ್ರ ಚಹಲ್ 2 ವಿಕೆಟ್ ಕಬಳಿಸಿದರು.
90 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡುವುದರ ಜೊತೆಗೆ ಏಕದಿನ ರ್ಯಾಂಕಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದಿದೆ, ಉತ್ತಮ ಪ್ರದರ್ಶನ ತೋರಿದ ಆಲ್ ರೌಂಡರ್ ಶಾದು೯ಲ್ ಠಾಕೂರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಶುಭಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…