ರೋಹಿತ್ ಪಡೆಗೆ ಸರಣಿ ಕ್ಲೀನ್ ಸ್ವೀಪ್! ODI ನಂಬರ್ ಒನ್ ಸ್ಥಾನಕ್ಕೇರಿದ ಟೀಂ ಇಂಡಿಯಾ

ಇಂದೋರ್ : ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ದ್ವಿಶತಕದ ಜೊತೆಯಾಟದ ಜೊತೆಗೆ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ಬಲದಿಂದ ಕೊನೆಯ ಪಂದ್ಯದಲ್ಲಿ 90 ರನ್‌ಗಳ ಅಂತರದಿಂದ ಗೆದ್ದು ಭಾರತ ತಂಡ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ನಂಬರ್ ಒನ್ ಸ್ಥಾನ ತನ್ನದಾಗಿಸಿಕೊಂಡಿತು.

ಮದ್ಯಪ್ರದೇಶದ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ತಂಡದ ನಾಯಕ ಟಾಮ್ ಲ್ಯಾಥಮ್ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸುವ ಮೂಲಕ ರೋಹಿತ್ ಶರ್ಮಾ ಪಡೆಯನ್ನು ಕಟ್ಟಿಹಾಕುವ ಆಲೋಚನೆಯಲ್ಲಿದ್ದರು.

ಪ್ರವಾಸಿ ತಂಡದ ಆಹ್ವಾನದ ಮೇರೆಗೆ ಬ್ಯಾಂಕಿಂಗ್ ಗೆ ಬಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 101 ರನ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 13 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 112 ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಜೊತೆಯಾಟದಲ್ಲಿ 212 ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದ ಸ್ಪಿನ್ನರ್ ಬ್ರೈಸ್ ವೆಲ್ ಮೊದಲ ಬ್ರೇಕ್ ನೀಡಿದರು, ನಂತರ ಶುಭ್ಮಮನ್ ಗಿಲ್ ಟಿಕ್ಕರ್ ಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ 30 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ವಾಶಿಂಗ್ಟನ್ ಸುಂದರ್ ಬೇಗನೇ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಉಪನಾಯಕ ಹಾರ್ದಿಕ್ ಪಾಂಡ್ಯ(54) ಹಾಗೂ ಆಲ್ ರೌಂಡರ್ ಲಾಡ್೯ ಶಾದು೯ಲ್ ಠಾಕೂರ್ (25) ರನ್ ಗಳಿಸಿ ತಂಡದ ಮೊತ್ತವನ್ನು 385ರ ಗಡಿ ದಾಟಿಸಿ ಬೃಹತ್ ಮೊತ್ತ ಕಲೆ ಹಾಕಿದರು, ನ್ಯೂಜಿಲೆಂಡ್ ಪರ ಫರ್ಗುಸನ್ ಹಾಗೂ ಜಾಕೋಬ್ ತಲಾ 3 ವಿಕೆಟ್ ಪಡೆದು ಗಮನ ಸೆಳೆದರು.

ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ನ್ಯೂಜಿಲೆಂಡ್ ತಂಡ ರನ್ ಗಳಿಸುವ ಮೊದಲೇ ಫಿನ್ ಅಲೆನ್ (0) ಅವರಿಗೆ ಹಾರ್ದಿಕ್ ಪಾಂಡ್ಯ ಪೆವಿಲಿಯನ್ ದಾರಿ ತೋರಿಸಿದರು, ನಂತರ ಒಂದಾದ ಕಾನ್ವೆ 12 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ (138)ರನ್ ಗಳಿಸಿದರೆ ನಿಕೊಲಾಸ್ 42 ರನ್ ಗಳಿಸಿ ಎರಡನೇ ವಿಕೆಟ್‍ಗೆ 106 ರನ್ ಗಳಿಸುವ ಮೂಲಕ ಆಸರೆಯಾದರು.

ಡೇನಿಯಲ್ ಮಿಚೆಲ್, ಸ್ಯಾಂಟ್ನರ್ ಹಾಗೂ ಬ್ರೆಸ್ವೆಲ್ ಅಲ್ಪ ಪ್ರಮಾಣದ ಪ್ರತಿರೋಧ ತೋರಿದರೂ ಸಹ 295 ರನ್ ಗಳಿಸಲಷ್ಟೇ ಸಾಧ್ಯವಾಯಿತು, ಭಾರತದ ಪರವಾಗಿ ಶಾದು೯ಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಅವರಿಗೆ 3 ವಿಕೆಟ್ ಹಾಗೂ ಯಜುವೇಂದ್ರ ಚಹಲ್ 2 ವಿಕೆಟ್ ಕಬಳಿಸಿದರು.

90 ರನ್ ಅಂತರದ ಜಯ ಸಾಧಿಸುವ ಮೂಲಕ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡುವುದರ ಜೊತೆಗೆ ಏಕದಿನ ರ್ಯಾಂಕಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದಿದೆ, ಉತ್ತಮ ಪ್ರದರ್ಶನ ತೋರಿದ ಆಲ್ ರೌಂಡರ್ ಶಾದು೯ಲ್ ಠಾಕೂರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಶುಭಮನ್ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

7 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

19 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

21 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

23 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

23 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago